ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಒಂದು ಹಳ್ಳಿಯಲ್ಲಿ ಸುಮಾರು 68 ಮನೆಗಳು ಸುಟ್ಟುಹೋಗಿವೆ. ಮನೆಗಳು ಸುಟ್ಟು ಕರಕಲಾದ ಕಾರಣ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು ಸಂತ್ರಸ್ತರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿದರು. ಮಂಗಳವಾರ ಮಧ್ಯಾಹ್ನ ಕಿಶ್ತ್ವಾರ್‌ನ ಮುಲ್ವಾರ್ವಾನ್ ಗ್ರಾಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ 68 ಮನೆಗಳು ಸುಟ್ಟು ಕರಕಲಾಗಿವೆ. ನೂರಾರು ನಿವಾಸಿಗಳು ಪರದಾಡುವಂತಾಯಿತು. ಚಳಿಯಿಂದಾಗಿ ಮಕ್ಕಳು, ವೃದ್ಧರು ತೀವ್ರ ತೊಂದರೆ ಅನುಭವಿಸಿದರು. ಮನೆ ಕಳೆದುಕೊಂಡ ಸಂತ್ರಸ್ತರು ಸರಕಾರ ತಮಗೆ ನೆರವು ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಈ ಮಾಹಿತಿ ತಿಳಿದ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಬೆಂಕಿಯಲ್ಲಿ ಮನೆ ಕಳೆದುಕೊಂಡವರು ತಾತ್ಕಾಲಿಕ ಟೆಂಟ್‌ಗಳಲ್ಲಿ ಆಶ್ರಯ ಪಡೆದಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಆಹಾರ, ಬಟ್ಟೆ, ವೈದ್ಯಕೀಯ ಮತ್ತು ಪರಿಹಾರ ಸಾಮಗ್ರಿಗಳನ್ನು ಒದಗಿಸಲಾಗಿದೆ ಎಂದು ಕಿಶ್ತ್ವಾರ್ ಜಿಲ್ಲಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ವಿಪತ್ತು ನಿರ್ವಹಣಾ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.
ಮತ್ತೊಂದೆಡೆ, ಈ ಬೆಂಕಿಯಲ್ಲಿ 40 ಮನೆಗಳಿಗೆ ಹಾನಿಯಾಗಿದೆ ಎಂದು ಆರಂಭದಲ್ಲಿ ತಿಳಿದುಬಂದಿದೆ ಎಂದು ರಾಜೇಶ್ ಕುಮಾರ್ ಹೇಳಿದರು. ಆದರೆ, ಒಟ್ಟು 68 ಮನೆಗಳು ಸುಟ್ಟು ಕರಕಲಾಗಿವೆ ಎಂದು ತಿಳಿಸಿದರು. ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ಹಾಗೂ ಪುನರ್ವಸತಿ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಥಳೀಯ ಪ್ರಾಧಿಕಾರ ತಿಳಿಸಿದೆ.