Friday, June 14, 2024

ಸತ್ಯ | ನ್ಯಾಯ |ಧರ್ಮ

ಆರಂಭಿಕ ಹಂತದಲ್ಲಿ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಹಿನ್ನಡೆ

ರಾಜ್ಯ ರಾಜಕೀಯದ ಕುತೂಹಲ ಕೆರಳಿಸಿದ್ದ ಹಾಸನ ಲೋಕಸಭೆ ಚುನಾವಣಾ ಫಲಿತಾಂಶದಲ್ಲಿ ಆರಂಭಿಕ ಹಂತದಲ್ಲಿ ಲೈಂಗಿಕ ದೌರ್ಜನ್ಯದ ಆರೋಪಿ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಹಿನ್ನಡೆ ಅನುಭವಿಸಿದ್ದಾರೆ.

ಮೊದಲ ಹಂತದಲ್ಲೇ ಶ್ರೇಯಸ್ ಪಟೇಲ್ ಮುನ್ನಡೆ ಕಾಯ್ದುಕೊಂಡಿದ್ದು, ಹಾಸನ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ಹಾಕಲಿದ್ದಾರೆಯೇ ಎಂಬ ಕುತೂಹಲ ಮನೆ ಮಾಡಿದೆ.

ಚುನಾವಣೆಗೆ ಕೇವಲ 5 ದಿನಗಳ ಮುಂಚೆ ಅಶ್ಲೀಲ ಪೆನ್ ಡ್ರೈವ್ ಹೊರಬಿದ್ದದ್ದೇ ಪ್ರಜ್ವಲ್ ರೇವಣ್ಣ ಹಿನ್ನಡೆಗೆ ಪ್ರಮುಖ ಕಾರಣ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು