ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ವ್ಯಕ್ತಿಯನ್ನು ಪೋಕ್ಸೋ ಪ್ರಕರಣದ ಮೇಲೆ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ದೌರ್ಜನ್ಯ ಎಸಗಿರುವ ವ್ಯಕ್ತಿಯು ದೇವರಾಜ್‌(24) ಸ್ಥಳಿಯ ನಿವಾಸಿಯಾಗಿದ್ದು, ಪ್ಲೈವುಡ್‌ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ದೇವರಾಜನು ಬಾಲಕಿಯನ್ನು ಕೆಲವು ವರ್ಷಗಳ ಹಿಂದೆ ಪರಿಚಯ ಮಾಡಿಕೊಂಡಿದ್ದು ಬಾಲಕಿಯೊಂದಿಗೆ ಸಲುಗೆ ಬೆಳೆಸಿದ್ದ, ಹಾಗಾಗಿ ಆಕೆಯನ್ನು ಹಲವೆಡೆ ಸುತ್ತಾಡಿಸಿ, ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ಆತನ ಸ್ನೇಹಿತರು ಕೂಡ ಸಹಕಾರ ನೀಡಿದ್ದು, ಆತನ ಮೇಲೆ ಪ್ರಕರಣ ದಾಖಲಾಗಿರುವುದರಿಂದ ಅವರು ಕೂಡ ತಲೆಮರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಪೋಲಿಸ್‌ ಮೂಲಗಳ ಪ್ರಕಾರ, ಬಾಲಕಿಯು ದೂರಿನಲ್ಲಿ ಆಕೆಯ ಮೆಲೆ ದೌರ್ಜನ್ಯ ಎಸಗಿರುವ ಆರೋಪಿ, ಲೈಂಗಿಕ ದೌರ್ಜನ್ಯ ಮಾಡಿರುವ ವಿಡಿಯೋ ಮಾಡಿಕೊಂಡು, ನಿನಗೆ ಈಗ 17 ವರ್ಷ 18 ವರ್ಷ ದಾಟಿದ ನಂತರ ನನ್ನನ್ನೇ ಮದುವೆಯಾಗಬೇಕು ಇಲ್ಲದಿದ್ದರೆ, ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡು ಬಾಲಕಿಯು ವಿಷಯವನ್ನು ಪೋಷಕರಿಗೆ ತಿಳಿಸಿದ್ದಾರೆ. ನಂತರ ಪೋಷಕರೊಂದಿಗೆ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ದೂರಿನ ಮೇಲೆ ವ್ಯಕ್ತಿಯನ್ನು ಬಂಧಿಸಿ ವಿಚಾರಿಸಿದಾಗ, ದೇವರಾಜ ಮತ್ತು ಬಾಲಕಿಯೂ ಐದು ವರ್ಷಗಳಿಂದ ಪ್ರೀತಿಸುತ್ತಿದ್ದು, ಬಾಲಕಿಯೂ ಇತ್ತೀಚಿಗೆ ಆತನನ್ನು ದೂರವಿಡಲು ಪ್ರಾರಂಭಿಸಿದ್ದರಿಂದ ಆತನೂ ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ ಎಂದು ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು