Tuesday, March 4, 2025

ಸತ್ಯ | ನ್ಯಾಯ |ಧರ್ಮ

ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಿದ ಸಚಿವ: ಪಶ್ಚಿಮ ಬಂಗಾಳದಾದ್ಯಂತ ಎಸ್‌ಎಫ್‌ಐ ಪ್ರತಿಭಟನೆ

ಪಶ್ಚಿಮ ಬಂಗಾಳದಲ್ಲಿ, ಆಡಳಿತಾರೂಢ ಟಿಎಂಸಿ ನಾಯಕ ಮತ್ತು ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು, ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಕಾರು ಹರಿಸಿದ್ದರು.

ಈ ಘಟನೆ ಪಶ್ಚಿಮ ಬಂಗಾಳದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಎಸ್‌ಎಫ್‌ಐ ಕರೆ ನೀಡಿದ್ದಂತೆ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು. ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ದೆಹಲಿಯ ಪಶ್ಚಿಮ ಬಂಗಾಳ ಭವನಕ್ಕೆ ಎಸ್‌ಎಫ್‌ಐ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಶಿಕ್ಷಣ ಸಚಿವ ಬ್ರಾತ್ಯ ಬಸು ಅವರನ್ನು ಬಂಧಿಸಿ ಜೈಲಿಗೆ ಹಾಕಬೇಕೆಂದು ಒತ್ತಾಯಿಸಿ ಅವರು ಘೋಷಣೆಗಳನ್ನು ಕೂಗಿದರು.

ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ, ಸಿಲಿಗುರಿ ಮತ್ತು ಡಾರ್ಜಿಲಿಂಗ್ ಸೇರಿದಂತೆ ಉತ್ತರ ಬಂಗಾಳದ ವಿವಿಧ ಭಾಗಗಳಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಎಸ್‌ಎಫ್‌ಐ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಟಿಎಂಸಿ ವಿದ್ಯಾರ್ಥಿ ವಿಭಾಗ ತೃಣಮೂಲ ಛತ್ರ ಪರಿಷತ್ ಮತ್ತು ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದಾರೆ. ಮಿಡ್ನಾಪುರದ ವಿದ್ಯಾಸಾಗರ್ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳಿಗೆ ಹೊರಗಿನವರು ನುಗ್ಗಿ ದಾಳಿ ಮಾಡಿದರು.

ಪಶ್ಚಿಮ ಬಂಗಾಳದ ಜಾದವ್‌ಪುರ ವಿಶ್ವವಿದ್ಯಾಲಯ (ಜೆಯು)ಕ್ಕೆ ಶನಿವಾರ ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು.

ಪಶ್ಚಿಮ ಬಂಗಾಳ ಕಾಲೇಜು ಮತ್ತು ವಿಶ್ವವಿದ್ಯಾಲಯ ಪ್ರಾಧ್ಯಾಪಕರ ಸಂಘದ (WBCUPA) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬಸು ಭಾಗವಹಿಸಿದ್ದ ಸಂದರ್ಭದಲ್ಲಿ, ಎಡಪಂಥೀಯ ವಿದ್ಯಾರ್ಥಿ ಗುಂಪುಗಳು ರಾಜ್ಯದಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ತಕ್ಷಣ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದವು.

ಸಚಿವ ಬ್ರಾತ್ಯ ಬಸು ಹಿಂತಿರುಗುತ್ತಿದ್ದಾಗ, ಪ್ರತಿಭಟನಾ ನಿರತ SFI ಕಾರ್ಯಕರ್ತರ ಮೇಲೆ ಕಾರನ್ನು ನುಗ್ಗಿಸಲಾಯಿತು. ಇದರಿಂದಾಗಿ ಹಲವಾರು SFI ಕಾರ್ಯಕರ್ತರು ಗಾಯಗೊಂಡರು. ವಿದ್ಯಾರ್ಥಿಗಳಿಗೆ ಗಾಯಗೊಳಿಸಿದ್ದಕ್ಕಾಗಿ ಸಚಿವ ಬ್ರಾತ್ಯ ಬಸು ಅವರನ್ನು ಬಂಧಿಸಬೇಕೆಂದು SFI ಒತ್ತಾಯಿಸಿದೆ.

ಸಚಿವರು ಹೋದ ಸ್ವಲ್ಪ ಸಮಯದ ನಂತರ, ಎಡಪಂಥೀಯ ಶಿಕ್ಷಕರ ಸಂಘದ ಕಚೇರಿಯನ್ನು ಸುಟ್ಟುಹಾಕಲಾಯಿತು. ಪೊಲೀಸರು ಏಳು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ, ಇದರಲ್ಲಿ ಎರಡು ಸುಮೊಟೋ ಕೇಸುಗಳು ಸೇರಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page