Home ಬ್ರೇಕಿಂಗ್ ಸುದ್ದಿ ದೆಹಲಿ ವಿದ್ಯಾರ್ಥಿಗಳ ಮೇಲೆ ದಾಳಿ ಖಂಡಿಸಿ, ಧರ್ಮೇಂದರ್‌ ಪ್ರಧಾನ್‌ ರಾಜಿನಾಮೆಗೆ ಒತ್ತಾಯಿಸಿ – ಎಸ್‌ಎಫ್‌ಐ ಪ್ರತಿಭಟನೆ

ದೆಹಲಿ ವಿದ್ಯಾರ್ಥಿಗಳ ಮೇಲೆ ದಾಳಿ ಖಂಡಿಸಿ, ಧರ್ಮೇಂದರ್‌ ಪ್ರಧಾನ್‌ ರಾಜಿನಾಮೆಗೆ ಒತ್ತಾಯಿಸಿ – ಎಸ್‌ಎಫ್‌ಐ ಪ್ರತಿಭಟನೆ

ಹಾಸನ: ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ಹಾಸನದಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಧರಣಿ ನಡೆಸಿದರು. ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನೀಟ್ ಅಕ್ರಮದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ವಿದ್ಯಾರ್ಥಿಗಳು, ತಮ್ಮ ಬೇಡಿಕೆಗಳ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

You cannot copy content of this page

Exit mobile version