Saturday, September 6, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಒತ್ತಾಯಿಸಿ SFI ಪ್ರತಿಭಟನೆ

ಹಾಸನ : Sfi ಜಿಲ್ಲಾ ಸಮಿತಿ ವತಿಯಿಂದ ಪದವಿ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಲಾಯಿತು ಪ್ರತಿಭಟನೆಯಲ್ಲಿ Sfi ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್ ಮಾತನಾಡುತ್ತಾರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿ 2 ತಿಂಗಳು ಕಳೆದಿದೆ. ರಾಜ್ಯದಲ್ಲಿರುವ ಬಹುತೇಕ ಸರ್ಕಾರಿ ಪದವಿ ಕಾಲೇಜುಗಲ್ಲಿ 70% ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಕಾಲೇಜುಗಳು ಪ್ರಾರಂಭವಾಗಿ 2 ತಿಂಗಳು ಕಳೆದರು ಅತಿಥಿ ಉಪನ್ಯಾಸಕರ ನೇಮಕಾತಿಯಾಗಿಲ್ಲ. ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ UGC ಮತ್ತು NON UGC ಎಂಬ ಗೊಂದಲದಿಂದಾಗಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ ಹಾಗೂ ವಿದ್ಯಾರ್ಥಿಗಳ ಬದುಕು ಅತಂತ್ರ ಸ್ಥಿತಿಯಂತಾಗಿದೆ. ಹೆಚ್ಚಾಗಿ ಸರ್ಕಾರಿ ಕಾಲೇಜುಗಳಲ್ಲಿ, ಬಡವ, ರೈತ, ಕಾರ್ಮಿಕ, ದಲಿತ, ಹಿಂದುಳಿದ ವಿದ್ಯಾರ್ಥಿಗಳು ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ತುರ್ತಾಗಿ ಕಾಲೇಜು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವ ಮೂಲಕ ಮಧ್ಯಪ್ರವೇಶಿಸಿ ಆತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಯ ಮಾಡದೇ “ಸೇವಾ ಹಿರಿತನದ ಆಧಾರದ ಮೇಲೆ ನೇಮಕ ಮಾಡಬೇಕೆಂದು ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಲ್ಲಿ ಆಯೋಗ ರಚಿಸಬೇಕು ಮತ್ತು ತುರ್ತಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕೆಂದು ಆಗ್ರಹಿಸಿದರು ಮುಂದಿನ ದಿನಗಳಲ್ಲಿ ಸರ್ಕಾರ ಸಮಸ್ಯೆಗಳನ್ನು ಬಗೆಹರಿಸದೆ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ
ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್ , Dyfi ನ ಪೃಥ್ವಿ ಎಂ.ಜಿ ಕಾರ್ಯದರ್ಶಿ ವಿವೇಕ್, ಛಾಯ, ವಿಕ್ಕಿ, ರಂಗ ಅಫ್ತಾಬ್ ಇನ್ನಿತರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page