Home ನಿಧನ ಸುದ್ದಿ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ

0

ದಾವಣಗೆರೆ, ಡಿಸೆಂಬರ್ 14: ರಾಜ್ಯದ ಕಾಂಗ್ರೆಸ್ ಪಕ್ಷದ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಕಳೆದ ಒಂದು ತಿಂಗಳಿನಿಂದ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನರಾಗಿದ್ದಾರೆ.

95 ವರ್ಷಗಳ ಪ್ರಾಯದಲ್ಲಿಯೂ ಸಕ್ರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ರಾಜ್ಯ ರಾಜಕೀಯದಲ್ಲಿ ಅಪರೂಪದ ಹಿರಿಯ ನಾಯಕನಾಗಿದ್ದರು. ಶಾಸಕರಾಗಿ ಸೇವೆ ಸಲ್ಲಿಸುತ್ತಲೇ ಜನಪ್ರತಿನಿಧಿಯಾಗಿ, ಪ್ರಬಲ ಲಿಂಗಾಯತ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದ ಅವರು ಏಕೈಕ ಹಿರಿಯ ರಾಜಕಾರಣಿಯಾಗಿ ಹೆಸರು ಮಾಡಿದ್ದರು.

ಅವರ ನಿಧನದಿಂದ ರಾಜ್ಯ ರಾಜಕೀಯಕ್ಕೆ ದೊಡ್ಡ ನಷ್ಟ ಉಂಟಾಗಿದ್ದು, ಕಾಂಗ್ರೆಸ್ ಪಕ್ಷದ ವಲಯದಲ್ಲಿ ಹಾಗೂ ಅಭಿಮಾನಿಗಳಲ್ಲಿ ತೀವ್ರ ಶೋಕ ವ್ಯಾಪಿಸಿದೆ.

You cannot copy content of this page

Exit mobile version