Sunday, April 28, 2024

ಸತ್ಯ | ನ್ಯಾಯ |ಧರ್ಮ

ಶಮಿ ಶಸ್ತ್ರಚಿಕಿತ್ಸೆ ಯಶಸ್ವಿ, ಶೀಘ್ರದಲ್ಲೇ ಕ್ರಿಕೆಟ್ ಮೈದಾನಕ್ಕೆ ಮರಳುವ ಭರವಸೆ ತೋರಿಸಿದ ಕ್ರಿಕೆಟಿಗ

ವೇಗದ ಬೌಲರ್ ಮೊಹಮ್ಮದ್ ಶಮಿ ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅವರು ತಮ್ಮ ಚಿಕಿತ್ಸೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಯಶಸ್ವಿ ಶಸ್ತ್ರಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ ಶಮಿ ಅವರು ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಶಮಿ ಪ್ರಕಾರ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸ್ವಲ್ಪ ಸಮಯ ಹಿಡಿಯುತ್ತದೆ, ಆದರೆ ಅವರು ಕ್ರಿಕೆಟ್ ಕ್ಷೇತ್ರಕ್ಕೆ ಮರಳುವ ವಿಶ್ವಾಸವನ್ನು ಹೊಂದಿದ್ದಾರೆ. ಪುನರಾಗಮನಕ್ಕಾಗಿ ಅದ್ಭುತ ಉತ್ಸಾಹವನ್ನು ತೋರಿಸುತ್ತಾ, ಶಮಿ ಹೇಳಿದರು, ‘ಇದೀಗ ಹಿಮ್ಮಡಿಯ ಅಕಿಲ್ಸ್ ಟೆಂಡನ್‌ (Achilles Tendon) ಆಪರೇಷನ್‌ ಯಶಸ್ವಿಯಾಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ಈಗ ನಾನು ನನ್ನ ಕಾಲುಗಳ ಮೇಲೆ ನಿಲ್ಲುವ ದಿನಗಳಿಗಾಗಿ ಉತ್ಸುಕನಾಗಿ ಕಾಯುತ್ತಿದ್ದೇನೆ.ʼ

ವಿಶ್ವಕಪ್ ವೇಳೆ ಗಾಯಗೊಂಡಿದ್ದರು

ನವೆಂಬರ್ 19ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ODI ವಿಶ್ವಕಪ್ ಫೈನಲ್ 2023 ರ ಸಂದರ್ಭದಲ್ಲಿ ಶಮಿ ಗಾಯಗೊಂಡಿದ್ದರು. ಅವರು ಗಾಯಗೊಂಡ ಪಾದದ ಜೊತೆಗೆ ವಿಶ್ವಕಪ್‌ನಲ್ಲಿ ಆಡಿದ್ದರು. ಅವರು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು ಏಳು ಪಂದ್ಯಗಳಲ್ಲಿ 24 ವಿಕೆಟ್ಗಳನ್ನು ಪಡೆದರು. ಅವರು ಈ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ, ಇದಾದ ಬಳಿಕ ನಿರಂತರವಾಗಿ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ.

ಶಮಿ ಐಪಿಎಲ್‌ನಲ್ಲಿ ಆಡುವಂತಿಲ್ಲ

ಐಪಿಎಲ್ 2024 ಆರಂಭವಾಗಲು ಇನ್ನೂ ಸುಮಾರು ಒಂದು ತಿಂಗಳು ಬಾಕಿ ಇದೆ. ಅದಕ್ಕೂ ಮುನ್ನ 2022ರ ಚಾಂಪಿಯನ್ ತಂಡ ಮತ್ತು 2023ರ ರನ್ನರ್ ಅಪ್ ಗುಜರಾತ್ ಟೈಟಾನ್ಸ್ ದೊಡ್ಡ ಹಿನ್ನಡೆ ಅನುಭವಿಸಿವೆ. ಎಡ ಪಾದದ ಗಾಯದಿಂದಾಗಿ ಶಮಿ ಸಂಪೂರ್ಣ ಐಪಿಎಲ್ ಸೀಸನ್‌ನಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಗಾಯದ ಸಮಸ್ಯೆಯಿಂದ ಶಮಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಆಯ್ಕೆಯಾಗಿರಲಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಇದಲ್ಲದೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರಗುಳಿದಿದ್ದರು. ಶಮಿ ಅನುಪಸ್ಥಿತಿಯು ಗುಜರಾತ್‌ಗೆ ತುಂಬಾ ನಷ್ಟವನ್ನು ತರಲಿದೆ. ಹಾರ್ದಿಕ್ ಪಾಂಡ್ಯ ಗುಜರಾತ್ ತೊರೆದು ಮುಂಬೈ ಇಂಡಿಯನ್ಸ್ ಗೆ ತೆರಳಿರುವುದರಿಂದ ತಂಡ ಈಗಾಗಲೇ ನಷ್ಟ ಎದುರಿಸುತ್ತಿದೆ. ಗುಜರಾತ್ ತಂಡದ ನಾಯಕರಾಗಿದ್ದ ಹಾರ್ದಿಕ್ ಅವರನ್ನು ಕಳೆದ ವರ್ಷ ಹರಾಜಿಗೂ ಮುನ್ನ ಮುಂಬೈ ತಂಡ ಖರೀದಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು