Wednesday, September 10, 2025

ಸತ್ಯ | ನ್ಯಾಯ |ಧರ್ಮ

ಬಸವಾದಿ ಶರಣರ ಆಶಯದಂತೆ ನಾವು ಮನುಷ್ಯರಾಗಿ, ಪರಸ್ಪರ ಮನುಷ್ಯರನ್ನು ಪ್ರೀತಿಸುವಂತಾಗಬೇಕು: ಸಿ.ಎಂ ಕರೆ

ಬೆಂಗಳೂರು ಜು 2:ಬಸವಾದಿ ಶರಣರ ಆಶಯದಂತೆ ನಾವು ಮನುಷ್ಯರಾಗಿ, ಪರಸ್ಪರ ಮನುಷ್ಯರನ್ನು ಪ್ರೀತಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ವಚನ ಸಾಹಿತ್ಯವನ್ನು ಮುಂದಿನ ತಲೆಮಾರಿಗೆ ದಾಟಿಸಿದ್ದರಲ್ಲಿ ಹಳಕಟ್ಟಿಯವರ ಕೊಡುಗೆ ಅಪಾರ. ವಚನ ಮತ್ತು ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಮೇರು ಕೊಡುಗೆ. ವಚನ ಸಾಹಿತ್ಯ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ಅರ್ಥ ಆಗುವ ಜನಸಾಮಾನ್ಯರ ಭಾಷೆಯಲ್ಲಿದ್ದವು. ಅದಕ್ಕೂ ಮೊದಲು ಜನ ಸಾಮಾನ್ಯರಿಗೆ ಗೊತ್ತಿಲ್ಲದ, ಜನಸಾಮಾನ್ಯರಿಗೆ ಅರ್ಥವಾಗದ ಭಾಷೆಯಲ್ಲಿ ಧರ್ಮವನ್ನು ಪ್ರಚಾರ ಮಾಡಲಾಗುತ್ತಿತ್ತು. ಜನಸಾಮಾನ್ಯರ ಭಾಷೆಯಲ್ಲಿ ಜನರಿಗೆ ಹತ್ತಿರ ಇದ್ದುದರಿಂದಲೇ ಬಸವಣ್ಣ ಜನಸಮುದಾಯದೊಳಗೆ ಬೆರೆತುಹೋದರು ಎಂದು ವಿಶ್ಲೇಷಿಸಿದರು.

ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಶೋಧನೆ ಮತ್ತು ಅಧ್ಯಯನಗಳ ಮೂಲಕ ಮುಂದಿನ ತಲೆಮಾರಿಗೆ ತಲುಪಿಸಿದರು. ಏಕೀಕರಣ ಚಳವಳಿಯಲ್ಲೂ ಭಾಗವಹಿಸಿದ್ದ ಹಳಕಟ್ಟಿಯವರು ಪತ್ರಕರ್ತರಾಗಿ, ವಕೀಲರಾಗಿ, ಸಾಹಿತಿಯಾಗಿ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದವರು ಎಂದು ಸಿಎಂ ಮೆಚ್ಚುಗೆ ಸೂಚಿಸಿದರು.‌

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಇಲಾಖೆಯ ನಿರ್ದೇಶಕಿ ಧರಣೀದೇವಿ ಮಾಲಗತ್ತಿ , ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಗರಾಜಮೂರ್ತಿ ಸೇರಿ ಹಲವರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page