Saturday, October 4, 2025

ಸತ್ಯ | ನ್ಯಾಯ |ಧರ್ಮ

ಶಾಸಕ ಜಮೀರ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಬಿಡುವುದಿಲ್ಲ ಎಂದ ಶಾಸಕ ಜಮೀರ್ ಖಾನ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.

ಗಣೇಶ ಹಬ್ಬ ಕೇವಲ ಒಂದು ಧರ್ಮಕ್ಕೆ ಸೀಮಿತವಾದ ಹಬ್ಬವಲ್ಲ. ಗಣೇಶೋತ್ಸವದ ಮೂಲಕ ತಿಲಕರು ಸ್ವಾತಂತ್ರö್ಯ ಕಿಚ್ಚು ಹಚ್ಚಿದ್ದರು. ರಾಷ್ಟç ಜೋಡಣೆಗೆ ಬಹುಮುಖ್ಯ ಪಾತ್ರ ವಹಿಸಿದ ಗಣೇಶ ಉತ್ಸವವನ್ನು ಮಾಡುವುದು ಬೇಡ ಎನ್ನಲು ಕಾಂಗ್ರೆಸ್ ನಾಯಕರು ಯಾರು ಎಂದು ಬಿಜೆಪಿ ಪ್ರಶ್ನಿಸಿದೆ.

ಈದ್ಗಾ ಮೈದಾನದಲ್ಲಿ ಇಷ್ಟು ದಿನ ಧ್ವಜಾರೋಹಣ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಜಮೀರ್ ಅಹ್ಮದ್ ಖಾನ್ ಈಗ ಗಣೇಶೋತ್ಸವಕ್ಕೆ ವಿರೋಧಿಸುತ್ತಿದ್ದಾರೆ. ಚಾಮರಾಜಪೇಟೆಯ ಈದ್ಗಾ ಮೈದಾನವು ದಾಖಲೆಗಳ ಪ್ರಕಾರ ಕಂದಾಯ ಇಲಾಖೆಗೆ ಸೇರಿದ್ದಾಗಿದ್ದು, ಆದರೂ ಜಮೀರ್ ತಮ್ಮ ಸ್ವಂತ ಜಾಗ ಅಂದುಕೊAಡು ಗಣೇಶೋತ್ಸವವನ್ನು ಮಾಡುವಂತಿಲ್ಲ ಎನ್ನುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದ ನಿಲುವು ಏನೆಂಬುದು ಬಹಿರಂಗವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page