ರಾಮನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ 09 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ಅಗತ್ಯ ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಭವನ, 2ನೇ ಮಹಡಿ, ಬಿ.ಎಂ ರಸ್ತೆ ರಾಮನಗರ ಇಲ್ಲಿಗೆ ಸೆಪ್ಟಂಬರ್ 30 ರೊಳಗಾಗಿ ಸಲ್ಲಿಸುವುವಂತೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ೦೮೦-೨೯೫೨೪೯೯೬, ೯೧೦೮೭೭೯೭೧೪ ಗೆ ಸಂಪರ್ಕಿಸಬಹುದಾಗಿದೆ.