Monday, July 28, 2025

ಸತ್ಯ | ನ್ಯಾಯ |ಧರ್ಮ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕತ್ವ: ಬಿಸಿಸಿಐ

ನವದೆಹಲಿ: ಭಾರತದಲ್ಲಿ ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದ್ದು, ತಂಡದ ನಾಯಕನಾಗಿ ಶಿಖರ್ ಧವನ್, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ, ಅಕ್ಟೋಬರ್ 2 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.‌

ಅಕ್ಟೋಬರ್ 6 ರಿಂದ 3 ಪಂದ್ಯಗಳ ಏಕದಿನ ಸರಣಿಯು ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಲಖನೌ ನಲ್ಲಿ ನಡೆಯಲಿದೆ.

ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ಪಟ್ಟಿ ಹೀಗಿದೆ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್‌ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್ , ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ದೀಪಕ್ ಚಹಾರ್.‌

Related Articles

ಇತ್ತೀಚಿನ ಸುದ್ದಿಗಳು

You cannot copy content of this page