ಟೀಂ ಇಂಡಿಯಾದ ಅನುಭವಿ ಆಟಗಾರ ಶಿಖರ್ ಧವನ್ ಅಂತರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಟೀಂ ಇಂಡಿಯಾದ ಅತ್ಯಂತ ಅಪಾಯಕಾರಿ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಶಿಖರ್ ಧವನ್ ಬಹಳ ಸಮಯ ತಂಡದಿಂದ ಹೊರಗುಳಿದಿದ್ದರು.
ಶಿಖರ್ ಧವನ್ ಡಿಸೆಂಬರ್ 2022ರಲ್ಲಿ ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಅಲ್ಲಿಂದ ಇಲ್ಲಿಯವರೆಗೆ ಅವರು ಟೀಂ ಇಂಡಿಯಾದಿಂದ ಹೊರಗಿದ್ದರು.
ಟೀಂ ಇಂಡಿಯಾದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಶಿಖರ್ ಧವನ್ ಟೀಂ ಇಂಡಿಯಾದಿಂದ ಹೊರಬರುವ ನಿರ್ಧಾರದಿಂದ ಅವರ ಅಭಿಮಾನಿಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಟೀಂ ಇಂಡಿಯಾದ ಗಬ್ಬರ್ ಎಂದೇ ಖ್ಯಾತಿ ಪಡೆದಿರುವ ಶಿಖರ್ ಧವನ್ ಶೀಘ್ರದಲ್ಲೇ ತಂಡಕ್ಕೆ ಮರಳುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿತ್ತು, ಆದರೆ ಇದೀಗ ಸ್ವತಃ ಶಿಖರ್ ಧವನ್ ನಿವೃತ್ತಿ ನಿರ್ಧಾರ ಕೈಗೊಂಡು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಶಿಖರ್ ಧವನ್ ವೃತ್ತಿ ಜೀವನ ಹೇಗಿತ್ತು?
ಟೀಂ ಇಂಡಿಯಾ ಪರ ಶಿಖರ್ ಧವನ್ ಒಟ್ಟು 34 ಟೆಸ್ಟ್, 167 ಏಕದಿನ ಹಾಗೂ 68 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 2315 ರನ್, ಏಕದಿನದಲ್ಲಿ 6793 ರನ್ ಮತ್ತು ಟಿ20 ಪಂದ್ಯಗಳಲ್ಲಿ 1759 ರನ್ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ ಶಿಖರ್ ಧವನ್ ಅವರ ಗರಿಷ್ಠ ಸ್ಕೋರ್ 190 ರನ್ ಆಗಿದ್ದರೆ, ಏಕದಿನ ಕ್ರಿಕೆಟ್‌ನಲ್ಲಿ ಅವರು 143 ರನ್‌ಗಳ ಗರಿಷ್ಠ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಅದೇ ಸಮಯದಲ್ಲಿ, ಟಿ20 ಕ್ರಿಕೆಟ್‌ನಲ್ಲಿ ಅವರ ಅತ್ಯುತ್ತಮ ಸ್ಕೋರ್ 92 ರನ್.