Home ರಾಜ್ಯ ಶಿವಮೊಗ್ಗ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ; ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕ ಪರಾರಿ

ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ; ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕ ಪರಾರಿ

0

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

ಶಿವಮೊಗ್ಗದ ಮೆಡಿಕಲ್ ಕಾಲೇಜಿನಲ್ಲಿ ಡಾ.ಅಶ್ವಿನ್ ಹೆಬ್ಬಾರ್ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಸಹ ಪ್ರಾಧ್ಯಾಪಕ ಅಶ್ವಿನ್ ಹೆಬ್ಬಾರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.

ಈ ಹಿಂದೆಯೂ ಡಾ.ಅಶ್ವಿನ್ ವಿರುದ್ಧ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು. ಆಗ ಕಾಲೇಜಿನಿಂದ 3 ತಿಂಗಳು ಅಮಾನತು ಕೂಡ ಕಾಲೇಜು ಆಡಳಿತ ಮಂಡಳಿ ಕಡೆಯಿಂದ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಆಗಿದ್ದರು.

ಆದರೆ ಈ ಬಾರಿ ಸಂತ್ರಸ್ಥ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ ಡಾ. ಅಶ್ವಿನ್ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಪೊಲೀಸರು ಆರೋಪಿ ಅಶ್ವಿನ್ ಹೆಬ್ಬಾರ್ ವಿರುದ್ಧ ದೂರು ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಕಾಲೇಜಿನ ಆಂತರಿಕ ತನಿಖಾ ವರದಿ, ಪೊಲೀಸ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಸಿಮ್ಸ್ ಆಡಳಿತಾಧಿಕಾರಿ ಉಮಾ ಡಿ ಸದಾಶಿವ ತಿಳಿಸಿದ್ದಾರೆ.

You cannot copy content of this page

Exit mobile version