ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆ ಮೂಲಕ ನ್ಯಾಯಾಲಯ ಸಿಬಿಐ ವಾದವನ್ನು ತಳ್ಳಿ ಹಾಕಿದೆ.
ಸರ್ಕಾರದ ಪರ ಕಪಿಲ್ ಸಿಬಲ್, ಡಿಕೆ ಶಿವಕುಮಾರ್ ಪರ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ಪರ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ಈ ನಡುವೆ ಸಂಪುಟದ ನಿರ್ಧಾರದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಾ ಮೇಲ್ಮನವಿ ಸಲ್ದಿಸಿದ್ದರು. ಯತ್ನಾಳ್ ಪರವಾಗಿ ವೆಂಕಟೇಶ್ ದಳವಾಯಿ ವಾದ ಮಂಡಿಸಿದ್ದರು. ಇಂದು ಸರ್ಕಾರದ ಅನುಮತಿ ನಿರ್ಧಾರ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸಿಜೆ ಪಿ.ಬಿ ವರ್ಲೆ ಮತ್ತು ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಆರಂಭಿಸಿತು.
ಈ ಅರ್ಜಿಯ ವಿಚಾರಣೆ ಇಂದು ಆರಂಭಗೊಳ್ಳುತ್ತಿದ್ದಂತೇ, ಹೈಕೋರ್ಟ್ ಗೆ ಸರ್ಕಾರದ ನಿರ್ಧಾರದ ಲಿಖಿತ ಪ್ರತಿಯನ್ನು ಎಜೆ ಶಶಿಕಿರಣ್ ಶೆಟ್ಟಿ ಸಲ್ಲಿಸಿದರು.
ಆ ಬಳಿಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ವಾದ-ಪ್ರತಿವಾದ ನಡೆದು, ಅಂತಿಮವಾಗಿ ಪಂಜಾಬ್ ಸರ್ಕಾರದ ಕೇಸ್ ಉಲ್ಲೇಖಿಸಿ, ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ವಾಪಾಸ್ ಪಡೆಯಲು ಅನುಮತಿಸಿತು. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ಸಿಬಿಐ ತನಿಖೆ ಈಗಾಲೇ ಮುಕ್ತಾಯದ ಹಂತದಲ್ಲಿದೆ. ಒಮ್ಮೆ ನೀಡಿದ ಒಪ್ಪಿಗೆಯನ್ನು ಸರ್ಕಾರ ಹಿಂಪಡೆಯುವಂತಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಈ ಬಗ್ಗೆ ಸ್ಪಷ್ಟವಿದೆ ಎಂಬುದೈಗಿ ಹೈಕೋರ್ಟ್ ನಲ್ಲಿ ಸಿಬಿಐ ಪರ ವಕೀಲರು ವಾದಿಸಿದರು.
ಸರ್ಕಾರ ಒಪ್ಪಿಗೆ ಹಿಂಪಡೆದ್ರೂ ಸಿಬಿಐ ತನಿಖೆ ಮುಂದುವರೆಸಲಿದೆ. ಸುಪ್ರೀಂ ಕೋರ್ಟ್ ನ 1994ರ ತೀರ್ಪು ಉಲ್ಲೇಖಿಸಿದರು. ಕಾಜಿ ಲೆಂಡಪ್ ದೋರ್ಜಿ ಪ್ರಕರಣದಲ್ಲಿ ನೀಡಿದಂತ ಸುಪ್ರೀಂ ಕೋರ್ಟ್ ತೀರ್ಪನ್ನು ಸಿಬಿಐ ಪರ ವಕೀಲರು ಹೈಕೋರ್ಟ್ ಮುಂದಿಟ್ಟರು.
ನಿಮ್ಮ ಅಹವಾಲನ್ನು ಪ್ರತ್ಯೇಕ ಅರ್ಜಿಯಲ್ಲಿ ಸಲ್ಲಿಸಿ. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಸ್ಪಷ್ಟವಾಗಿದೆ ಎಂಬುದಾಗಿ ವಿಭಾಗೀಯ ಪೀಠದ ನ್ಯಾ.ಕೃಷ್ಣ ದೀಕ್ಷಿತ್ ತಿಳಿಸಿದರು.
ಈ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಹೈಕೋರ್ಟ್ ನಲ್ಲಿ ತಮ್ಮ ವಾದನ ಮಂಡನೆ ಶುರುಮಾಡಿದರು. ಅವರು ಸುಪ್ರೀಂ ಕೋರ್ಟ್ ತೀರ್ಪನ್ನು ಸರ್ಕಾರ ಉಲ್ಲಂಘಿಸುವಂತಿಲ್ಲ. ತೀರ್ಪು ಉಲ್ಲಂಘಿಸಿ ನಮಗೆ ಬೇಕಾದಂತೆ ಮಾಡಿಕೊಳ್ಳುತ್ತೇವೆ ಎನ್ನುವಂತಿಲ್ಲ. ಡಿಕೆಶಿ ಪರ ಇಡೀ ಸಂಪುಟ ನಿಂತು ಕಾನೂನು ಬಾಹಿರ ಕ್ರಮ ಕೈಗೊಂಡಿದೆ ಎಂಬುದಾಗಿ ಆಕ್ಷೇಪಿಸಿದರು.
ಆಗ ಮದ್ಯಪ್ರವೇಶಿಸಿದಂತ ಡಿಕೆಶಿ ಪರ ವಕೀಲ ಅಭಿಶೇಖ್ ಸಿಂಘ್ವಿ ಅವರು, ಈ ಪ್ರಕರಣದಲ್ಲಿ ವಾದ ಮಂಡಿಸಲು ನೀವು ಯಾರು ಎಂಬುದಾಗಿ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿಗೆ ಪ್ರಶ್ನಿಸಿದರು. ಅಲ್ಲದೇ ಯತ್ನಾಳ್ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು.
ಡಿಕೆಶಿ ಪರ ವಕೀಲರು ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುತ್ತಿದ್ದಂತೇ, ಕೆಲ ಕಾಲ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಯಿತು. ಆ ಬಳಿಕ ತನ್ನ ತೀರ್ಪು ಪ್ರಕಟಿಸಿದಂತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸಿಬಿಐ, ಯತ್ನಾಳ್ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ. ಈವರೆಗೂ ಸರ್ಕಾರದ ಕ್ರಮ ಯಾರು ಪ್ರಶ್ನಿಸಿ ಅರ್ಜಿ ಸಲ್ಲಿಸಿಲ್ಲ. ಕಾಜಿ ಲೆಂಡಪ್ ದೋರ್ಜ್ ಪ್ರಕರಣದ್ಲಲಿ ಸರ್ಕಾರದ ಕ್ರಮ ಪ್ರಶ್ನಿಸಲಾಗಿತ್ತು ಎಂಬುದಾಗಿ ಹೇಳುವ ಮೂಲಕ, ಡಿಕೆ ಶಿವಕುಮಾರ್ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿ ವಾಪಾಸ್ ಗೆ ಅನುಮತಿಸಿತು. ಈ ಮೂಲಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.