ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ್ದ ದೂರುದಾರ ಶಿವಕುಮಾರ್ ಈಗ ನಾಪತ್ತೆಯಾಗಿದ್ದು, ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ ನಂತರ ಶಿವಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸೂರಜ್ ಪರ ಯುವಕರು ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವವರು ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ಇದೀಗ ಸಂತ್ರಸ್ತನ ದೂರಿನ ಅನ್ವಯ ಸೂರಜ್ನನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆಯೇ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದಾರೆ.
ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದು ತನಿಖೆ ಪ್ರಗತಿಯಲ್ಲಿದೆ.