Monday, June 17, 2024

ಸತ್ಯ | ನ್ಯಾಯ |ಧರ್ಮ

ಶಿವಸೇನಾ ಮುಖಂಡ ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್!

ನವದೆಹಲಿ: ಶಿವಸೇನಾ ಮುಖಂಡ ಸಂಜಯ್ ರಾವತ್ ಜಾರಿ ನಿರ್ದೇಶನಾಲಯದಿಂದ ಬಂಧನದಲ್ಲಿ ಇರುವಾಗಲೇ ಮತ್ತೊಂದು ಆಘಾತ ಬಂದೆರಗಿದೆ. ಈಗ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ರಾವತ್ ಇತ್ತೀಚಿಗೆ ಇಡಿ ಮುಂದೆ ನಾಟಕೀಯ ರೀತಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ನಂತರ ಅವರನ್ನು ಬಂಧಿಸಲಾಗಿತ್ತು. ಈಗ ರಾವತ್ ಪತ್ನಿ ಕೂಡ ಇಡಿ ಕುಣಿಕೆಗೆ ಸಿಕ್ಕಿಬಿದ್ದಿದ್ದಾರೆ.

ಮುಂಬೈನ ವಿಶೇಷ ನ್ಯಾಯಾಲಯವೊಂದು ಸಂಜಯ್ ರಾವತ್ ಅವರ ಕಸ್ಟಡಿಯನ್ನು ಆ.8ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಭೂ ಹಗರಣವೊಂದರ ಸಂಬಂಧ ವರ್ಷಾ ರಾವತ್ ಅವರಿಗೆ ಸಮನ್ಸ್ ಜಾರಿಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು