Home ಬೆಂಗಳೂರು KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕ – ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು

KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕ – ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು

ಬೆಂಗಳೂರು: ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ಅಲ್ಲದೆ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕಗೊಳಿಸುವಂತೆ ಸೂಚನೆ ನೀಡಿದೆ.

KPSC ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜುಲೈ 10ರಂದು ರಾಜ್ಯಪಾಲರು ಅಮಾನತು ಮಾಡಿದ್ದರು. ಈ ಸಂಬಂಧ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದರಾವ್ ಅವರಿದ್ದ ಹೈಕೋರ್ಟ್ ಪೀಠ ಮಹತ್ವದ ತೀರ್ಪು ನೀಡಿದೆ.

ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ ಅಥವಾ ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದು ಕೋರ್ಟ್ ಹೇಳಿದ್ದು, 7 ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡುವಂತೆ ಸೂಚಿಸಿದೆ.

You cannot copy content of this page

Exit mobile version