Saturday, June 15, 2024

ಸತ್ಯ | ನ್ಯಾಯ |ಧರ್ಮ

ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆ ; ಚುನಾವಣೆ ಸಮೀಪದಲ್ಲೇ ಬಿಜೆಪಿಗೆ ಶಾಕ್ ಮೇಲೆ ಶಾಕ್

ಚುನಾವಣೆ ಸಂದರ್ಭದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿಯೇ ನಡೆಯುತ್ತಿದೆ. ಇನ್ನೇನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಪ್ರತಾಪ್ ಸಿಂಹ ಅವರ ಕೈ ತಪ್ಪುವ ಹಂತದಲ್ಲೇ ತನಗೇ ಟಿಕೆಟ್ ಬಯಸಿದ್ದ ಮಾಜಿ ಪತ್ರಕರ್ತೆ ತೇಜಸ್ವಿನಿ ಗೌಡ ಈಗ ಟಿಕೆಟ್ ಯದುವೀರ್ ಒಡೆಯರ್ ಮಡಿಲು ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇತ್ತೀಚಿಗಷ್ಟೇ ಎಂಎಲ್‌ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಪಕ್ಷ ಬಿಡುವ ಮುನ್ಸೂಚನೆ ಕೊಟ್ಟಿದ್ದ ತೇಜಸ್ವಿನಿ ಗೌಡ, ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಈಗ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ  ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದಾರೆ.

ದೆಹಲಿಯಲ್ಲಿ (New Delhi) ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಹತ್ತು ವರ್ಷಗಳ ಹಿಂದೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ ತೇಜಸ್ವಿನಿ ಅವರು ಈಗ ಮತ್ತೆ ಕಾಂಗ್ರೆಸ್‌ಗೆ ವಾಪಸ್ಸಾಗಿದ್ದಾರೆ. 

ತೇಜಸ್ವಿನಿ ಗೌಡ ಅವರು ಬಿಜೆಪಿಯಲ್ಲಿ ಅಸಮಾಧಾನಗೊಂಡ ಬೆನ್ನಲ್ಲೇ ಪೀಪಲ್ ಮೀಡಿಯಾ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವರದಿ ನೀಡಿತ್ತು. ಅದರ ಬೆನ್ನಲ್ಲೇ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿಯಬೇಕೆಂದರೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಇದೆ ಎಂದು ತೇಜಸ್ವಿನಿ ಗೌಡ ಅಭಿಪ್ರಾಯ ಪಟ್ಟಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು