ಬೆಳಗಾವಿ : ಇಂದಿನಿಂದ (ಡಿ.8) ಬೆಳಗಾವಿಯ (Belagavi) ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Winter session) ಆರಂಭವಾಗಿದ್ದು, ಮೊದಲ ದಿನವೇ ರಾಜ್ಯ ಸರ್ಕಾರ ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ (Shoes distribution) ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ವಿಧಾನ ಪರಿಷತ್ ನಲ್ಲಿ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರು ಸರ್ಕಾರವನ್ನು ಪ್ರಶ್ನೆ ಕೇಳಿದ್ದಾರೆ. ಈ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ ಈ ಬಾಗರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು 44 ಸಾವಿರದ 525 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿದ್ದು, ಎಲ್ಲಾ ಜಿಲ್ಲೆಯ ಶಾಲೆಗಳು ಒಳಗೊಂಡಂತೆ ಈ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
