Home ಬ್ರೇಕಿಂಗ್ ಸುದ್ದಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

0

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಾದ ಬಗ್ಗೆ ವರದಿಯಾಗಿದೆ.

ಆರೋಗ್ಯದಲ್ಲಿ ಅಂತಹ ಏರುಪೇರುಗಳು ಕಂಡುಬಾರದೇ ಇದ್ದರೂ ಮೂಲವ್ಯಾಧಿ ಚಿಕಿತ್ಸೆಗಾಗಿ ತಮ್ಮ ವಯಕ್ತಿಕ ವೈದ್ಯರ ಸಲಹೆಯಂತೆ ಹೆಚ್ಚಿನ ತಪಾಸಣೆಗೆ ಆಸ್ಪತ್ರೆಗೆ ದಾಖಲಾದ ಬಗ್ಗೆ ಮೂಲಗಳು ತಿಳಿಸಿವೆ. ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮುಂಬರುವ ಚುನಾವಣೆ ಹಿನ್ನಲೆಯಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರುವ ಕಾರಣ ಆರೋಗ್ಯದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ನಿರಂತರ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುವುದು ಗಮನಾರ್ಹ. ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಜೊತೆಗೆ ನಾಲ್ಕು ದಿನಗಳ ವಿಶ್ರಾಂತಿ ತಗೆದುಕೊಳ್ಳಲು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

You cannot copy content of this page

Exit mobile version