ಬೆಂಗಳೂರು : ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ (Gruhalaxmi scheme) 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ (Siddaramaiah) ಬಜೆಟ್ನಲ್ಲಿ ಘೋಷಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದ್ದು, 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ವಿಕಲಚೇತನರ ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ನಿರುದ್ಯೋಗಿಗಳಿಗೆ ಆಶಾಕಿರಣ
56 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಮಂಡನೆಯಲ್ಲಿ ಮಾಹಿತಿ ನೀಡಿದ್ದಾರೆ. ಇದರಿಂದ ಸರ್ಕಾರಿ ಕೆಲಸಕ್ಕೆ ಯತ್ನಿಸುತ್ತಿರುವ ಯುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಮೂಲಸೌಕರ್ಯಕ್ಕೆ 1,500 ಕೋಟಿ ರೂ. ಮೀಸಲು ಇಟ್ಟಿರುವುದಾಗಿಯೂ ಸಿಎಂ ಸಿದ್ದರಾಮಯ್ಯ ಹೇಳಿದರು.
