AICC ಕಾರ್ಯಕಾರಿ ಸಮಿತಿಗೆ ಸಿದ್ದರಾಮಯ್ಯ ನೇಮಕ

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದ ಅತ್ಯುನ್ನತ ನೀತಿ ನಿರ್ಧಾರಕ ವೇದಿಕೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಜೂನ್ 2ರಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷರ ಆದೇಶದಂತೆ ಸಿದ್ದರಾಮಯ್ಯ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ಪ್ರಮುಖ ನೀತಿ ಹಾಗೂ ಸಂಘಟನಾ ನಿರ್ಧಾರಗಳನ್ನು ಕೈಗೊಳ್ಳುವ ಅತ್ಯುನ್ನತ ಸಮಿತಿಯಾಗಿದೆ. ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಉನ್ನತ ಸಮಿತಿಯಲ್ಲಿ ಸ್ಥಾನ ನೀಡಿರುವುದು, ಪಕ್ಷದ ರಾಷ್ಟ್ರೀಯ ಮಟ್ಟದ ರಾಜಕೀಯದಲ್ಲಿ ಅವರ ಪ್ರಭಾವ ಮತ್ತು ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.

Related Articles

ಇತ್ತೀಚಿನ ಸುದ್ದಿಗಳು