Wednesday, June 26, 2024

ಸತ್ಯ | ನ್ಯಾಯ |ಧರ್ಮ

ವಿಧಾನಸೌಧ: ವೈಚಾರಿಕತೆಯ ಬಾಗಿಲು ತೆರೆದ ಸಿದ್ಧರಾಮಯ್ಯ

ರಾಜಕಾರಣಿಗಳೆಂದರೆ ಸದಾ ಕಂದಾಚಾರ, ವಿಚಿತ್ರ ನಂಬಿಕೆಗಳು, ದೇವ ಮಾನವರ ಮೊರೆ ಹೋಗುವವರು ಎನ್ನುವ ನಂಬಿಕೆ ಜನಸಾಮಾನ್ಯರಲ್ಲಿದೆ. ಆದರೆ ಕರ್ನಾಟಕದ ಮಟ್ಟಿಗೆ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸತೀಶ್‌ ಜಾರಕಿಹೊಳಿಯವರಂತಹ ರಾಜಕಾರಣಿಗಳು ಭಿನ್ನ ನೆಲೆಯಲ್ಲಿ ನಿಲ್ಲುತ್ತಾರೆ.

ಈಗ ವಿಧಾನಸೌಧದ ತನ್ನ ಕಚೇರಿಯಲ್ಲಿ ಹೊಸದೊಂದು ಹೆಜ್ಜೆಯಿಡುವ ಮೂಲಕ ಸಿದ್ಧರಾಮಯ್ಯನವರು ಸುದ್ದಿಯಾಗಿದ್ದಾರೆ. ಈ ಬಾರಿ ಅವರು ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ಪಶ್ಚಿಮ ದ್ವಾರ ತೆರೆಸಿದ್ದಾರೆ.

ಪಶ್ಚಿಮ ದ್ವಾರದ ಮೂಲಕ ಕಚೇರಿ ಪ್ರವೇಶಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ

ಇಂದು ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಪಶ್ಚಿಮ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ದಕ್ಷಿಣ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ಪಶ್ಚಿಮದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡುತ್ತಾ ಅವರು “ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು” ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.

ಸಭೆ ಮುಗಿದ ಬಳಿಕ ಮತ್ತೆ ಅದೇ ದ್ವಾರದಿಂದ ಮುಖ್ಯಮಂತ್ರಿಗಳು ಹೊರಬಂದರು.

Related Articles

ಇತ್ತೀಚಿನ ಸುದ್ದಿಗಳು