Thursday, June 13, 2024

ಸತ್ಯ | ನ್ಯಾಯ |ಧರ್ಮ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಂಪುಟ ಸಭೆ ಆರಂಭ

ಕರ್ನಾಟಕ ವಿಧಾನಸೌಭಾ ಚುನಾವಣೆ 2023ರಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸಿದ ಕಾಂಗ್ರೆಸ್‌, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಿ, ಡಿಕೆ ಶಿವಕುಮಾರ್‌ ಅವರನ್ನು ಉಪಮಂತ್ರಿಯಾಗಿ ಮಾಡಿದೆ. ಇಂದು ಪ್ರಮಾಣ ವಚನ ಸ್ವೀಕರಿಸಿದ ಇಬ್ಬರೂ ನಾಯಕರು ಹಾಗೂ ಎಂಟು ಸಚಿವರು ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಮಾಡುತ್ತಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಂಪುಟ ಸಭೆ ಆರಂಭವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್​, ಕೆ.ಹೆಚ್​.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್​ ಅಹ್ಮದ್ ಖಾನ್ ಉಪಸ್ಥಿತರಿದ್ದಾರೆ.

ಮೊದಲ ಸಂಪುಟದಲ್ಲೇ ಕಾಂಗ್ರೆಸ್‌ ನ 5 ಗ್ಯಾರಂಟಿಯನ್ನು ಅಸ್ತಿತ್ವಕ್ಕೆ ತರುತ್ತೇವೆ ಎಂದು ಹೇಳಿಕೊಂಡಿದ್ದ ಕಾಂಗ್ರಸ್‌ ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಘೋಷಣೆ ಮಾಡಲಿದೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು