Saturday, January 24, 2026

ಸತ್ಯ | ನ್ಯಾಯ |ಧರ್ಮ

ಸಿದ್ದರಾಮಯ್ಯ ಪರಿಶಿಷ್ಟ ಸಮುದಾಯಗಳತ್ತ ತಿರುಗಿಯೂ ನೋಡಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಣ್ಣೊರೆಸುವುದಿರಲಿ ಐದು ವರ್ಷಗಳ ಕಾಲ ಅವರ ಕಡೆ ತಿರುಗಿಯೂ ನೋಡಿರಲಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಬುಧವಾರದಂದು ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ʼ ಒಳಮೀಸಲಾತಿಗೆ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು  ಈ ಕುರಿತ ವರದಿಯನ್ನು ತೆಗೆದು ನೋಡುವ ಧೈರ್ಯ ಇರಲಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಬರೀ ದೀಪ ಹಚ್ಚಿ ಮಾತನಾಡದೆ ಬಂದರು. ಇಂಥವರಿಂದ  ನಾವು ಪಾಠ ಕಲಿಯಬೇಕಿಲ್ಲ. ನಮ್ಮ ಬದ್ಧತೆ ಏನೆಂದು ಎಲ್ಲಾ ಸಮುದಾಯಗಳಿಗೆ ತಿಳಿದಿದೆ. ಕಾನೂನು ಸ್ಥಾನಮಾನವೂ ನಮಗೆ ತಿಳಿದಿದೆ. ಇಂಥ ಪ್ರಮುಖ ವಿಚಾರಗಳಲ್ಲಿ ನಿರ್ಣಯ ಕೈಗೊಳ್ಳುವ ದಿಟ್ಟತನ ಸರ್ಕಾರಕ್ಕಿದೆ ಎಂದು ತೋರಿಸಿದ್ದೇವೆ.  ಇನ್ನೊಬ್ಬರ ಬಗ್ಗೆ ಮಾತನಾಡುವ ಮುನ್ನ ಸಿದ್ದರಾಮಯ್ಯ ಹಿಂತಿರುಗಿ ನೋಡಿದರೆ ಉತ್ತಮ ಎಂದು ಬೊಮ್ಮಾಯಿ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page