ರಾಜ್ಯದ ಹಲವು ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಸ್ತಾಪಿಸಿ ಪ್ರದಾನಿ ನರೇಂದ್ರ ಮೋದಿಯವರ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವು ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿ ಮನವಿ ಸಲ್ಲಿಸಿದ್ದಾರೆ.
‘ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು ವಿಚಾರಗಳನ್ನು ಒಳಗೊಂಡ ಮನವಿ ಪತ್ರವನ್ನು ನೀಡಿದರು.