Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಸಿದ್ದರಾಮಯ್ಯ ಅವಧಿಯ ಸರ್ಕಾರ 100% ಕಮಿಷನ್‌ ಸರ್ಕಾರವಾಗಿತ್ತು: ಬಿಜೆಪಿ ಆರೋಪ

ಸಿದ್ದರಾಮಯ್ಯ ಅವಧಿಯ ಸರ್ಕಾರ 100% ಕಮಿಷನ್‌ ಸರ್ಕಾರವಾಗಿತ್ತು: ಬಿಜೆಪಿ ಆರೋಪ

0


ಸಿದ್ದರಾಮಯ್ಯ ಅವಧಿಯ ಕಾಂಗ್ರೆಸ್‌ ಸರ್ಕಾರ 100% ಕಮಿಷನ್‌ ಸರ್ಕಾರವಾಗಿತ್ತು ಎಂದು ಬಿಜೆಪಿ ಸರಣಿ ಟ್ವೀಟ್‌ ಮಾಡುವುದರ ಮೂಲಕ ಸಿದ್ದರಾಮಯ್ಯ ಅವದಿಯ ಸರ್ಕಾರವನ್ನು ಟೀಕಿಸಿದೆ.

ಇದಕ್ಕೆ ಪೂರಕ ಎನ್ನುವುದಕ್ಕೆ ಶಿಕ್ಷಕರ ಅಕ್ರಮ ನೇಮಕಾತಿ ಹಗರಣವೇ ಸಾಕ್ಷಿ. ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್ ಎಂದು ಆರೋಪಿಸಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಅವರ ಮೂಗಿನಡಿಯಲ್ಲಿಯೇ ಶಿಕ್ಷಕ ಹುದ್ದೆಯೊಂದಕ್ಕೆ 5 ರಿಂದ 10 ಲಕ್ಷ ಡೀಲ್‌ ನಡೆದಿದೆ. ಕಾಂಗ್ರೆಸ್ಸಿಗರೇ, ಸರ್ಕಾರಿ ಹುದ್ದೆಗಳನ್ನು ಮಾರಾಟ ಮಾಡಿ ನೀವು ಎಷ್ಟು % ಕಮಿಷನ್‌ ಗಳಿಸಿದ್ದೀರಿ? ಎಂದು ಬಿಜೆಪಿ ಕಾಂಗ್ರೇಸ್‌ ಗೆ ಪ್ರಶ್ನೆ ಮಾಡಿದೆ.

ಕಾಂಗ್ರೆಸ್‌ ಸರ್ಕಾರದ ಪ್ರಭಾವಿ ಮಂತ್ರಿಗಳ ಶ್ರೀರಕ್ಷೆ ಇಲ್ಲದೆ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದ ಜಾಲ ರಾಜ್ಯವ್ಯಾಪಿ ಪಸರಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ ಸರ್ಕಾರ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿತರಾಗಿದ್ದಕ್ಕಿಂತ ಹೆಚ್ಚಾಗಿ ಹೈಕಮಾಂಡ್‌ ಗೆ ಕಪ್ಪ ಕಾಣಿಕೆ ನೀಡುವುದರಲ್ಲಿ ಮಗ್ನವಾಗಿತ್ತು ಎಂದು ಆರೋಪ ಮಾಡಿದೆ.

You cannot copy content of this page

Exit mobile version