Thursday, December 26, 2024

ಸತ್ಯ | ನ್ಯಾಯ |ಧರ್ಮ

ಅಪಘಾತದಲ್ಲಿ ಮೃತರಾದ ಯೋಧರಿಗೆ ಸಿಎಂ ಅಂತಿಮ ಗೌರವ; ಕುಟುಂಬಕ್ಕೆ ಸರಕಾರದಿಂದ ನೆರವು

ಬೆಳಗಾವಿ ಡಿ. 26: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

ಮೃತ ಯೋಧರು:

  • ದಯಾನಂದ ತಿರುಕಣ್ಣನವರ್ ಬೆಳಗಾವಿ
  • ಧನರಾಜ್ ಸುಭಾಷ್ ಚಿಕ್ಕೋಡಿ
  • ಮಹೇಶ್ ನಾಗಪ್ಪ ಬಾಗಲಕೋಟೆ
  • ಅನೂಪ್ ಪೂಜಾರಿ ಕುಂದಾಪುರ

Related Articles

ಇತ್ತೀಚಿನ ಸುದ್ದಿಗಳು

You cannot copy content of this page