Sunday, July 27, 2025

ಸತ್ಯ | ನ್ಯಾಯ |ಧರ್ಮ

ಇಂದು ಪ್ರಜ್ವಲ್‌ ರೇವಣ್ಣನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ

ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಎಸ್‌ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಿದ್ದು, ಎಸ್‌ಐಟಿ ಅಧಿಕಾರಿಗಳು ಇಂದು ಮಂಗಳವಾರ ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಕೋರ್ಟ್‌ ಗೆ ಹಾಜರುಪಡಿಸಲಿದ್ದಾರೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು.

ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ದ ಹೆಚ್ಚಿನ ತನಿಖೆಗಾಗಿ ಪ್ರಜ್ವಲ್ ರೇವಣ್ಣನನ್ನು ಮತ್ತೆ ಎಸ್‌ಐಟಿ ಕಸ್ಟಡಿಗೆ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕಸ್ಟಡಿಗೆ ಪಡೆಯಲು ಎಸ್ಐಟಿ ಕೋರ್ಟ್ ನಲ್ಲಿ ಸಿದ್ಧತೆ ನಡೆಸಿದೆ.

ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೂ ಪೊಲೀಸರಿಗೆ ತಲೆ ಬಿಸಿ ತಪ್ಪಿಲ್ಲ. ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಈವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಪೂರ್ಣಗೊಳಿಸಿದ್ದಾರೆ.

ಒಂದು ಪ್ರಕರಣ ಮುಗಿದ ಬೆನ್ನಲ್ಲೇ ಮತ್ತೊಂದು ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರತಿಯೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುವುದು. ಇದೀಗ ಮತ್ತೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್‌ಐಟಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page