Thursday, August 21, 2025

ಸತ್ಯ | ನ್ಯಾಯ |ಧರ್ಮ

ಹಾಸನ | ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವು

ಹಾಸನ: ಕರ್ನಾಟಕದ ಹಾಸನ ನಗರದ ಹೊರವಲಯದಲ್ಲಿ ಭಾನುವಾರ ಬೆಳಗ್ಗೆ 6.30ರ ಸುಮಾರಿಗೆ ಕಾರು ಮತ್ತು ಕಂಟೈನರ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು ಮತ್ತು ಒಂದು ಮಗು ಸಾವನ್ನಪ್ಪಿದ್ದಾರೆ.

ಮೃತರನ್ನು ಒಂದೇ ಕುಟುಂಬದ ನಾರಾಯಣಸ್ವಾಮಿ, ಸುನಂದಾ, ರವಿಕುಮಾರ್, ನೇತ್ರಾ, ಚೇತನ್, ರಾಕೇಶ್ ಎಂದು ಗುರುತಿಸಲಾಗಿದೆ.

ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಹೊಸಕೋಟೆ ತಾಲೂಕಿನ ಕಾರಹಳ್ಳಿ ಮೂಲದವರು ಎನ್ನಲಾಗಿದೆ.

ಮಂಗಳೂರಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಕುಟುಂಬ ತೆರಳಿದ್ದು, ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಮುಂದಿನ ಲೇನ್‌ಗೆ ಪಲ್ಟಿಯಾಗಿ ಎದುರು ದಿಕ್ಕಿನಿಂದ ಬರುತ್ತಿದ್ದ ಸರಕು ಸಾಗಣೆ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಗುರುತು ಸಿಗದಷ್ಟು ಕಾರು ಜಖಂಗೊಂಡಿದ್ದು, ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page