ಡೆಹ್ರಾಡೂನ್: ಉತ್ತರಾಖಂಡದಲ್ಲಿ ರಸ್ತೆ ಅಪಘಾತವೊಂದು ನಡೆದಿದೆ. ರಾಜ್ಯದ ರಾಜಧಾನಿ ಡೆಹ್ರಾಡೂನ್‌ನಲ್ಲಿ ನಡೆದ ಟ್ರಕ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಟ್ರಕ್ ಮತ್ತು ಇನ್ನೋವಾ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಬೆಳಗಿನ ಜಾವ ಎರಡು ಗಂಟೆಗೆ ಒಎನ್‌ಜಿಸಿ ಡಿವೈಡರ್ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಏಳು ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ಅದರಲ್ಲಿ ಮೂವರು ಬಾಲಕಿಯರು ಮತ್ತು ಮೂವರು ಬಾಲಕರು ಸಾವಿಗೀಡಾಗಿದ್ದಾರೆ.
ಓರ್ವ ವಿದ್ಯಾರ್ಥಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಅವನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಲ್ಲ ವಿದ್ಯಾರ್ಥಿಗಳು ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಾರೆ ಎಂದು ತಿಳಿದುಬಂದಿದೆ. ಟ್ರಕ್‌ಗೆ ಡಿಕ್ಕಿಯಾದ ರಭಸಕ್ಕೆ ಇನ್ನೋವಾ ಎರಡು ತುಂಡಾಗಿದೆ. ಕಾರನ್ನು ಕಟ್ ಮಾಡಿ ಶವಗಳನ್ನು ಹೊರತೆಗೆಯಬೇಕಾಯಿತು. ಲಾರಿ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ.
ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಆಗಮಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ವಿದ್ಯಾರ್ಥಿಗಳು ಮೃತದೇಹಗಳನ್ನು ಡೂನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಮಹಂತ್ ಇಂದ್ರೇಶ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರಲ್ಲಿ ದೆಹಲಿ ಮತ್ತು ಹಿಮಾಚಲ ಪ್ರದೇಶದ ವಿದ್ಯಾರ್ಥಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ಗುಣೀತ್ (19), ಕಾಮಾಕ್ಷಿ (20), ನವ್ಯಾ ಗೋಯಲ್ (23), ರಿಷಬ್ ಜೈನ್ (24), ಕುನಾಲ್ ಕುಕ್ರೇಜಾ (23), ಅತುಲ್ ಅಗರ್ವಾಲ್ (24) ಮೃತಪಟ್ಟವರು. ಗಾಯಗೊಂಡಿರುವ ವ್ಯಕ್ತಿ ಸಿದ್ದೇಶ್ ಅಗರ್ವಾಲ್ ಡೆಹ್ರಾಡೂನ್ ನಿವಾಸಿ ಎಂದು ಗುರುತಿಸಲಾಗಿದೆ.