Sunday, July 27, 2025

ಸತ್ಯ | ನ್ಯಾಯ |ಧರ್ಮ

ಹಾಲಿನ ಟ್ಯಾಂಕರ್‌ಗೆ ಸ್ಲೀಪರ್ ಬಸ್ ಡಿಕ್ಕಿ: 18 ಸಾವು

ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿರುವ ಭೀಕರ ಘಟನೆ ಉನ್ನಾವೊದ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನೆಲ್ಲ ಹೊರತೆಗೆದು ಸಿಎಚ್‌ಸಿ ಬಂಗಾರ್‌ಮೌವ್‌ಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಮೃತದೇಹಗಳನ್ನು ವಶಕ್ಕೆ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಹತಮುಜಾವರ ಪೊಲೀಸರು ಸುದ್ದಿಸಂಸ್ಥೆ ಎಎನ್‌ಐಗೆ ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಉನ್ನಾವೊ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಪಡೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page