Home ರಾಜ್ಯ ಇನ್ನು ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ – KERC ಸ್ಪಷ್ಟನೆ

ಇನ್ನು ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ – KERC ಸ್ಪಷ್ಟನೆ

0

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳನ್ನು ಹೊರತುಪಡಿಸಿ, ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಎಲ್ಲ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸುವುದಾಗಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಮೂಲಕ ಸ್ಮಾರ್ಟ್ ಮೀಟರ್ ಸಂಬಂಧ ಉಂಟಾಗಿದ್ದ ಗೊಂದಲಕ್ಕೆ ಆಯೋಗವು ತೆರೆ ಎಳೆದಿದೆ.

ಈ ಕುರಿತು ಇತ್ತೀಚೆಗೆ ಆದೇಶ ಹೊರಡಿಸಿರುವ KERC, ಇನ್ನು ಮುಂದೆ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದೆ. ಜೊತೆಗೆ, ತಾತ್ಕಾಲಿಕ ಸಂಪರ್ಕ ಪಡೆಯಲು ಇಚ್ಛಿಸುವವರಿಗೆ ಪ್ರಿಪೇಯ್ಡ್ ಮೀಟರ್‌ನೊಂದಿಗೆ ಸಂಪರ್ಕವನ್ನು ಒದಗಿಸಬೇಕು ಎಂದು ಸೂಚಿಸಿದೆ.

ಪ್ರಸ್ತುತ ಸಾಂಪ್ರದಾಯಿಕ ಮೀಟರ್‌ಗಳನ್ನು ಹೊಂದಿರುವ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯವಲ್ಲ. ಆದರೆ, ಗ್ರಾಹಕರು ಸ್ವ-ಇಚ್ಛೆಯಿಂದ ಪ್ರಿಪೇಯ್ಡ್ ಮೀಟರ್ ಬಿಲ್ಲಿಂಗ್ ಆಯ್ಕೆ ಮಾಡಿಕೊಂಡರೆ, ಅವರ ಸ್ವಂತ ವೆಚ್ಚದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಆದೇಶವು ‘ಕೇಂದ್ರೀಯ ವಿದ್ಯುತ್ಛಕ್ತಿ ಪ್ರಾಧಿಕಾರ (ಮೀಟರ್‌ಗಳ ಅಳವಡಿಕೆ ಮತ್ತು ನಿರ್ವಹಣೆ) (ಆಡಳಿತ) ನಿರ್ಬಂಧಗಳು-2022’ ಅಡಿಯಲ್ಲಿ ಹೊರಡಿಸಲಾಗಿದೆ ಎಂದು ಆಯೋಗ ತಿಳಿಸಿದೆ.

You cannot copy content of this page

Exit mobile version