Monday, July 28, 2025

ಸತ್ಯ | ನ್ಯಾಯ |ಧರ್ಮ

ಸ್ನೇಹಿತರ ದಿನಕ್ಕೆ ದಸರಾ ಪೋಸ್ಟರ್ ನಾನಿ ಜೊತೆ ದಿಯಾ ದೀಕ್ಷಿತ್ ಶೆಟ್ಟಿ

ತೆಲುಗು ಚಿತ್ರರಂಗದ ಖ್ಯಾತ ನಟ , ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹುನಿರೀಕ್ಷಿತ ‘ದಸರಾ’ ಸಿನಿಮಾ ಆರಂಭದಿಂದ ಬಹಳಷ್ಟು ಸದ್ದು ಮಾಡ್ತಿದೆ. ವಿಭಿನ್ನ ಪ್ರಕಾರದ ಸಿನಿಮಾಗಳನ್ನು ಚಿತ್ರಪ್ರೇಮಿಗಳಿಗೆ ಉಣಬಡಿಸುವ ನಾನಿ ಈ ಬಾರಿ ಮತ್ತೊಂದು ಫ್ರೆಶ್ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರುತ್ತಿದ್ದು, ಶ್ರೀಕಾಂತ್ ಒಡೆಲಾ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಮಾಸ್ ಅಂಡ್ ಆಕ್ಷನ್ ಸಿನಿಮಾವಾಗಿರುವ ದಸರಾ ಸಿನಿಮಾ ತೆಲುಗು ಜೊತೆಗೆ ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ  ತಯಾರಾಗುತ್ತಿದೆ. ನಾನಿ ಈ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಲಿದ್ದಾರೆ. ಈಗಾಗಲೇ ರಿಲೀಸ್ ಆಗಿದ್ದ ಫಸ್ಟ್ ಗ್ಲಿಂಪ್ಸ್ ಭಾರೀ‌ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಚಿತ್ರತಂಡ ಸ್ನೇಹಿತರ ದಿನದ ಅಂಗವಾಗಿ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿದೆ.

ಫ್ರೆಂಡ್ಸ್ ಶಿಪ್ ಡೇ ಅಂಗವಾಗಿ ನಾನಿ ಅಂಡ್ ಗ್ಯಾಂಗ್ ನ್ನು ಚಿತ್ರತಂಡ ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ಎರಡು ರೈಲ್ವೇ ಹಳಿಗಳ ನಡುವೆ ಇರುವ ಟ್ರ್ಯಾಕ್ ವೊಂದರಲ್ಲಿ ಕುಳಿತ ನಾನಿ‌ ಟೀಂನಲ್ಲಿ ಕನ್ನಡದ ಹುಡ್ಗ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಇದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ನಾನಿ ಜೋಡಿಯಾಗಿ ರಾಷ್ಟ್ರಪ್ರಶಸ್ತಿ ವಿಜೇತ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಲಿದ್ದಾರೆ. ಕಲ್ಲಿದ್ದಲು ಗಣಿಯಲ್ಲಿರುವ ಹಳ್ಳಿಯೊಂದರಲ್ಲಿ ನಡೆಯುವ ಪಕ್ಕಾ ಮಾಸ್ ಆಕ್ಷನ್ ಪ್ಯಾಕ್ಡ್ ಕಥೆಯನ್ನು ಹೊಂದಿರುವ ಸಿನಿಮಾದಲ್ಲಿ ಸಮುದ್ರಖನಿ, ಸಾಯಿ ಕುಮಾರ್, ಜರೀನಾ ವಹಾಬ್ ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ನಿರ್ಮಾಣ ಮಾಡಿದ್ದು, ಸತ್ಯನ್ ಸೂರ್ಯನ್ ಛಾಯಾಗ್ರಹಣ, ಸಂತೋಷ್ ನಾರಾಯಣನ್ ಸಂಗೀತ, ನವೀನ್ ನೂಲಿ ಸಂಕಲನ ಸಿನಿಮಾಕ್ಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page