Home ಲೋಕಸಭೆ ಚುನಾವಣೆ -2024 ಲೋಕಸಭಾ ಚುನಾವಣೆ ಫಲಿತಾಂಶ: ಆರಂಭಿಕ ಮುನ್ನಡೆ ಕಾಯ್ದುಕೊಂಡ ಸೋಮಣ್ಣ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ

ಲೋಕಸಭಾ ಚುನಾವಣೆ ಫಲಿತಾಂಶ: ಆರಂಭಿಕ ಮುನ್ನಡೆ ಕಾಯ್ದುಕೊಂಡ ಸೋಮಣ್ಣ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ

0

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ.

ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ ಗಳಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆಸಲಾಗಿದೆ. ಅಂಚೆ ಮತಗಳ ಎಣಿಕೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್, ತುಮಕೂರಿನಲ್ಲಿ ಬಿಜೆಪಿ, ದಾವಣಗೆರೆಯಲ್ಲಿ ಕಾಂಗ್ರೆಸ್, ಉಡುಪಿ- ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲೂ ಕಾಂಗ್ರೆಸ್‌ ಮುಂಚೂಣಿಯಲ್ಲಿದೆ

You cannot copy content of this page

Exit mobile version