Home ರಾಜ್ಯ ತುಮಕೂರು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ಅವರ 13 ವರ್ಷದ ಪುತ್ರ ಸಾವಿಗೆ ಶರಣು

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ಅವರ 13 ವರ್ಷದ ಪುತ್ರ ಸಾವಿಗೆ ಶರಣು

0

ತುಮಕೂರು: ತುಮಕೂರಿನಲ್ಲಿ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.

ಮೃತ ಬಾಲಕನನ್ನು 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ಎಂದು ಗುರುತಿಸಲಾಗಿದೆ.

ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕ ನೇಣಿಗೆ ಶರಣಾಗಿರುವುದಾಗಿ ವರದಿಯಾಗಿದೆ.

ಮೃತ ಬಾಲಕ ತ್ರಿಶಾಲ್ ಬಿಜೆಪಿ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿರುವ ಮತ್ತು ಬಲಪಂಥೀಯ ರಾಜಕೀಯ ಚಟುವಟಿಕೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಶಕುಂತಲಾ ನಟರಾಜ್‌ ಅವರ ಮಗನೆಂದು ಹೇಳಲಾಗಿದೆ.

ಬಾಲಕ ತಾಯಿಯೊಂದಿಗೆ ತುಮಕೂರು ನಗರದ ವಿಜಯನಗರದಲ್ಲಿ ವಾಸವಿದ್ದು, ಅದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಾವಿಗೆ ಶರಣಾಗಿರುವುದು ಪತ್ತೆಯಾಗಿದೆ.

ಮೃತ ಬಾಲಕ ಡೆತ್‌ ನೋಟ್‌ ಬರೆದಿಟ್ಟಿದ್ದು, ಅದರಲ್ಲಿ ಪಾರಿವಾಳದ ಬೆಟ್ಟಿಂಗ್‌ ವಿಚಾರದಲ್ಲಿ ಸ್ನೇಹಿತರೊಂದಿಗೆ ಗಲಾಟೆ ಮಾಡಿಕೊಂಡಿದ್ದು, ಅದರಿಂದ ಮನನೊಂದಿರುವುದಾಗಿ ಬರೆದಿಟ್ಟಿದ್ದಾನೆಂದು ಸುದ್ದಿ ಮಾಧ್ಯಮಗಳಯ ವರದಿ ಮಾಡಿವೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮಲ್ಲಿ ಆತ್ಮಹತ್ಯೆಯ ಯೋಚನೆಗಳು ಮೂಡುತ್ತಿದ್ದಲ್ಲಿ ದಯವಿಟ್ಟು ಈ ಸಂಖ್ಯೆಗಳನ್ನು ಸಂಪರ್ಕಿಸಿ. ಆತ್ಮಹತ್ಯೆ ತಡೆ ಸಹಾಯವಾಣಿ. ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಸ್ವಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ ಇಂತಿದೆ 080 – 25497777.

You cannot copy content of this page

Exit mobile version