ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಸ್ತಿನ ಅಥವಾ ಸೇಡಿನ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಕೇಂದ್ರ ಸಚಿವ ರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮ್ಮನ್ನು ಭೇಟಿ ಮಾಡಿ ವಿಚಾರಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸಿ ಅವರು ಈ ಕುರಿತು ಪತ್ರ ಬರೆದಿದ್ದಾರೆ.
ನಡೆದ ಸುದೀರ್ಘ ಚರ್ಚೆಗಳಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿಷಯವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಮಗೆ ಭರವಸೆ ನೀಡಿದೆ ಎಂದು ಅವರು ಬಹಿರಂಗಪಡಿಸಿದ್ದಾರೆ.
ಅಲ್ಲದೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲು ಸಹ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
