Home ದೆಹಲಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆ: ಚೇತರಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕಿ

ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆ: ಚೇತರಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕಿ

0

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಚೇತರಿಸಿಕೊಂಡು ಮಂಗಳವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಅವರು ಹೊಟ್ಟೆ ನೋವು ಮತ್ತು ಮೂತ್ರನಾಳದ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಾರ್ಚ್ 24 ರಂದು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದರು. ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಚಿಕಿತ್ಸೆಯ ನಂತರ ಅವರು ಈಗ ಗುಣಮುಖರಾಗಿದ್ದಾರೆ.

ಆಸ್ಪತ್ರೆಯ ತಜ್ಞ ವೈದ್ಯರ ತಂಡವು ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿಯನ್ನು ಹತ್ತಿರದಿಂದ ಗಮನಿಸಿ, ಸೋಂಕು ನಿವಾರಣೆಗೆ ಅಗತ್ಯವಾದ ಆಂಟಿಬಯೋಟಿಕ್ಸ್ ಚಿಕಿತ್ಸೆ ನೀಡಿದೆ. ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ. ಅಜಯ್ ಸ್ವರೂಪ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದ್ದು, ವೈದ್ಯಕೀಯ ವರದಿಗಳ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಆಸ್ಪತ್ರೆಯಿಂದ ಮನೆಗೆ ಮರಳಿರುವ ಸೋನಿಯಾ ಗಾಂಧಿ ಅವರು ವೈದ್ಯರ ಸೂಚನೆಯಂತೆ ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಅವರ ಕುಟುಂಬದ ಮೂಲಗಳ ಪ್ರಕಾರ, ಅಗತ್ಯವಿದ್ದಲ್ಲಿ ಮನೆಯಲ್ಲೇ ಚಿಕಿತ್ಸೆಯ ಪ್ರಕ್ರಿಯೆಗಳು ಮುಂದುವರಿಯಲಿವೆ.

You cannot copy content of this page

Exit mobile version