Tuesday, December 9, 2025

ಸತ್ಯ | ನ್ಯಾಯ |ಧರ್ಮ

ಮತದಾರರ ಪಟ್ಟಿಗೆ ಸೋನಿಯಾ ಗಾಂಧಿ ಹೆಸರು ಅನಧಿಕೃತ ಸೇರ್ಪಡೆ: ನ್ಯಾಯಾಲಯದಿಂದ ನೋಟಿಸ್ ಜಾರಿ

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ವಿರುದ್ಧ ಮತದಾರರ ಪಟ್ಟಿಗೆ ಅನಧಿಕೃತವಾಗಿ ಹೆಸರು ಸೇರಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಪರಿಷ್ಕರಣೆ ಅರ್ಜಿಯಂತೆ, ರೂಸ್ ಅವೆನ್ಯೂ ನ್ಯಾಯಾಲಯ ಸೋನಿಯಾ ಗಾಂಧಿ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.

ಅರ್ಜಿಯಲ್ಲಿ, ಸೋನಿಯಾ ಗಾಂಧಿಯು ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮುಂಚಿತವಾಗಿ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ಹಿನ್ನೆಲೆಯಲ್ಲಿ ಸೋನಿಯಾ ಬಂಧಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಲು ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲಾಗಿದ್ದು, ವಕೀಲ ವಿಕಾಸ್ ತ್ರಿಪಾಠಿ ಅವರು ದೆಹಲಿ ನ್ಯಾಯಾಲಯದಲ್ಲಿ ಈ ಪರಿಷ್ಕರಣೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಯ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸ್ ಇಲಾಖೆಯಿಂದ ಸ್ಪಷ್ಟ ಉತ್ತರಗಳನ್ನು ಕೋರಿಕೊಂಡಿದ್ದು, ಮುಂದಿನ ವಿಚಾರಣೆಯನ್ನು 6 ಜನವರಿ, 2026 ರಂದು ನಿಗದಿಪಡಿಸಿದೆ.

ಈ ಪ್ರಕರಣವು ಭಾರತದ ರಾಜಕೀಯ ವಿಚಾರದಲ್ಲಿ ಮಹತ್ವ ಪಡೆದುಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ತೀವ್ರ ಗಮನ ಸೆಳೆಯುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page