Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಸೂರಜ್ ರೇವಣ್ಣನಿಗೆ ಷರತ್ತುಬದ್ಧ ಜಾಮೀನು ಮಂಜೂರು

ಸೂರಜ್ ರೇವಣ್ಣನಿಗೆ ಷರತ್ತುಬದ್ಧ ಜಾಮೀನು ಮಂಜೂರು

0

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಜೆಡಿಎಸ್‌ ಮುಖಂಡ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ, ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿಯಾಗಬಾರದು. ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು. ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

You cannot copy content of this page

Exit mobile version