ಪಕ್ಷದ ಕಾರ್ಯಕರ್ತನ ಮೇಲೆ ನಡೆಸಿದ ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿತನಾಗಿರುವ ಎಂಎಲ್ಸಿ ಸೂರಜ್ ರೇವಣ್ಣ ಯಾವುದೇ ರೀತಿಯ ವೈದ್ಯಕೀಯ ಪರೀಕ್ಷೆಗೆ ನಕಾರಾತ್ಮಕವಾಗಿ ಸ್ಪಂದಿಸುತ್ತಿರುವುದಾಗಿ ತಿಳಿದು ಬಂದಿದೆ.
ವಿಚಾರಣೆ ಸಂದರ್ಭದಲ್ಲಿ ಪೊಲೀಸರಿಗೆ ಅಸಹಕಾರ ತೋರುತ್ತಿರುವ ಸೂರಜ್ ರೇವಣ್ಣ ಯಾವುದೇ ವೈದ್ಯಕೀಯ ಪರೀಕ್ಷೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ.
ಸೂರಜ್ ಮೇಲೆ ಆರೋಪ ಮಾಡಿದ ಯುವಕನನ್ನೂ ಪರೀಕ್ಷೆಗೊಳಪಡಿಸಲಾಗಿದೆ. ಆದರೆ ತಮ್ಮನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸುತ್ತಿರುವುದಕ್ಕೆ ಸೂರಜ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸೂರಜ್ ಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಆದರೆ ಈ ವೇಳೆ ಅವರು ಇದಕ್ಕೆ ತಕರಾರು ತೆಗೆದಿದ್ದಾರೆ. ನನಗೆ ಯಾಕೆ ಈ ಪರೀಕ್ಷೆಯಲ್ಲಾ ಮಾಡುತ್ತಿದ್ದೀರಿ ಎಂದು ಪೊಲೀಸರ ಮೇಲೆಯೇ ಕೂಗಾಡಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆಯೂ ಅವರು ಅಸಹಕಾರ ತೋರುತ್ತಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣದ ವಿಚಾರಣೆಯಲ್ಲಿ ಪ್ರತೀ ಹಂತದಲ್ಲೂ ಅಸಹಕಾರ ತೋರುತ್ತಿರುವ ಸೂರಜ್ ರೇವಣ್ಣ ‘ನಾನು ಗಂಡಸು, ನನಗ್ಯಾಕೆ ಈ ತರಹದ ಪರೀಕ್ಷೆ ಎಂದು ತಗಾದೆ ತಗೆದಿದ್ದಾರೆ ಎಂದು ತಿಳಿದು ಬಂದಿದೆ. ಯಾರೋ ನನ್ನ ಬಗ್ಗೆ ರಾಜಕೀಯ ವೈಷಮ್ಯಕ್ಕಾಗಿ ಇಂತಹ ಆರೋಪ ಮಾಡಿದ್ದಾರೆ. ನನ್ನ ಮೇಲಿನ ಆರೋಪಗಳಲ್ಲಿ ನಿಜಾಂಶವಿಲ್ಲ ಎಂದು ಸೂರಜ್ ರೇವಣ್ಣ ಪೊಲೀಸರ ವಿರುದ್ಧವೇ ಕೂಗಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.