Wednesday, August 14, 2024

ಸತ್ಯ | ನ್ಯಾಯ |ಧರ್ಮ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸೌಮ್ಯಾ ರೆಡ್ಡಿ

ಎಐಸಿಸಿಯಿಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನಾಯಕಿ ಸೌಮ್ಯ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ, ಅಧ್ಯಕ್ಷರ ಅನುಮತಿಯ ಮೇರೆಗೆ ಅರುಣಾಚಲ ಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚುಕು ನಾಚಿ ಅವರನ್ನು ನೇಮಕ ಮಾಡಲಾಗಿದೆ ಹಾಗೂ ಚಂಡೀಗಡದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಂದಿತಾ ಹೂಡ ಅವರನ್ನು ಆಯ್ಕೆ ಮಾಡಿದ ಬಗ್ಗೆ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕಾಂಗ್ರೆಸ್ ನಾಯಕಿ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಲಾಗಿರುವುದಾಗಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಪುಷ್ಪ ಅಮರನಾಥ್ ಅವರಿಂದ ತೆರವಾದ ಸ್ಥಾನಕ್ಕೆ ಸೌಮ್ಯ ರೆಡ್ಡಿ ಆಯ್ಕೆಯಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page