ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರನ್ನು ಕಡೆಗಣಿಸುವ ಯತ್ನ ನಡೆಯುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ.
ಸೌರವ್ ಗಂಗೂಲಿ ಐಸಿಸಿ (ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಮಮತಾ ಆಗ್ರಹಿಸಿದ್ದಾರೆ.
ಸೌರವ್ ಅವರನ್ನು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಗೆ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿರುವ ಮಮತಾ ಬ್ಯಾನರ್ಜಿ, ಸೌರವ್ ಅವರನ್ನು ಅನ್ಯಾಯವಾಗಿ ಹೊರಗಿಡಲಾಗಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
“ನನಗೆ ತುಂಬಾ ದುಃಖವಾಗಿದೆ. ಸೌರವ್ ಬಹಳ ಜನಪ್ರಿಯ ವ್ಯಕ್ತಿತ್ವ. ಅವರು ಭಾರತ ತಂಡದ ನಾಯಕರಾಗಿದ್ದರು. ಅವರು ದೇಶಕ್ಕೆ ಬಹಳಷ್ಟು ನೀಡಿದರು. ಅವರು ಬಂಗಾಳದ ಹೆಮ್ಮೆ ಮಾತ್ರವಲ್ಲ, ಭಾರತದ ಹೆಮ್ಮೆ. ಅವರನ್ನು ಏಕೆ ಹೊರಗಿಡಲಾಯಿತು? ನೀವು ಅನ್ಯಾಯದ ದಾರಿ ತುಳಿಯುತ್ತಿದ್ದೀರಿ” ಎಂದು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಹೇಳಿದ್ದಾರೆ.