Home ರಾಜಕೀಯ ಜನಸಂಖ್ಯೆ ಪ್ರಕಾರ ಕ್ಷೇತ್ರ ಮರುವಿಂಗಡಣೆ ನಡೆದರೂ ದಕ್ಷಿಣ ರಾಜ್ಯಗಳ ಸಂಸತ್‌ ಕ್ಷೇತ್ರಗಳು ಕಡಿಮೆಯಾಗುವುದಿಲ್ಲ: ಅಮಿತ್ ಶಾ

ಜನಸಂಖ್ಯೆ ಪ್ರಕಾರ ಕ್ಷೇತ್ರ ಮರುವಿಂಗಡಣೆ ನಡೆದರೂ ದಕ್ಷಿಣ ರಾಜ್ಯಗಳ ಸಂಸತ್‌ ಕ್ಷೇತ್ರಗಳು ಕಡಿಮೆಯಾಗುವುದಿಲ್ಲ: ಅಮಿತ್ ಶಾ

0

ಸಂಸದೀಯ ಕ್ಷೇತ್ರಗಳ ಪುನರ್ವಿಂಗಡಣೆಗೆ ಸಂಬಂಧಿಸಿದಂತೆ ತಮಿಳುನಾಡಿನ ಡಿಎಂಕೆ ಸರ್ಕಾರ, ಸಿಎಂ ಎಂಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಕುರಿತು ಚರ್ಚಿಸಲು ಮಾರ್ಚ್ 5ರಂದು ಸರ್ವಪಕ್ಷ ಸಭೆಯನ್ನೂ ಅವರು ಕರೆದಿದ್ದಾರೆ.

ಜನಗಣತಿ ಆಧಾರದ ಮೇಲೆ ಕ್ಷೇತ್ರಗಳ ಪುನರ್ವಿಂಗಡಣೆ ನಡೆದರೆ ತಮಿಳುನಾಡು 8 ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಟಾಲಿನ್ ಅವರ ಹೇಳಿಕೆಯನ್ನು ತಳ್ಳಿಹಾಕಿದರು. ತಮಿಳುನಾಡು ಒಂದೇ ಒಂದು ಸಂಸದೀಯ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಶಾ ಹೇಳಿದರು. “ಮರುವಿಂಗಡಣೆಯ ನಂತರವೂ ದಕ್ಷಿಣದ ಯಾವುದೇ ರಾಜ್ಯವು ಸ್ಥಾನಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ” ಎಂದು ಅವರು ಹೇಳಿದರು.

ಮುಂದಿನ ವರ್ಷದ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳ ಪುನರ್ರಚನೆ ನಡೆಯಲಿದ್ದು, ಇದು ದಕ್ಷಿಣ ರಾಜ್ಯಗಳಿಂದ ಲೋಕಸಭಾ ಸ್ಥಾನಗಳ ಕಡಿತಕ್ಕೆ ಕಾರಣವಾಗಬಹುದು ಎಂದು ಸ್ಟಾಲಿನ್ ಕಳವಳ ವ್ಯಕ್ತಪಡಿಸಿದರು. ಈ ವಿಷಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.

ಸಂಸತ್ತಿನಲ್ಲಿ ತಮಿಳುನಾಡಿನ ಪ್ರಾಮುಖ್ಯತೆ ಕಡಿಮೆಯಾಗುತ್ತದೆ ಎಂದು ಸ್ಟಾಲಿನ್ ಹೇಳಿದರು. ಇದು ತಮಿಳುನಾಡಿನ ಹಕ್ಕುಗಳ ವಿಷಯ ಎಂದು ಹೇಳಿದ ಅವರು, ರಾಜಕೀಯವನ್ನು ಮೀರಿ ಮಾತನಾಡುವಂತೆ ಪಕ್ಷಗಳಿಗೆ ಕರೆ ನೀಡಿದರು. ಮತ್ತೊಂದೆಡೆ, ಜನಸಂಖ್ಯಾ ನಿಯಂತ್ರಣವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ತಮ್ಮ ರಾಜ್ಯವು ತೊಂದರೆಗಳನ್ನು ಎದುರಿಸುತ್ತಿದೆ ಎಂದು ಅವರು ಹೇಳುತ್ತಾರೆ.

You cannot copy content of this page

Exit mobile version