ವಿಶೇಷ ನ್ಯಾಯಾಲಯವು ಈ ವರ್ಷದ ಜುಲೈ 16ರಂದು ನೀಡಿದ ತೀರ್ಪಿನಲ್ಲಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ ಅವರನ್ನು ಖುಲಾಸೆಗೊಳಿಸಿತ್ತು.
ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆ ವಿರುದ್ಧ ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಆದರೆ ತೀರ್ಪಿನ ಸುಮಾರು ನಾಲ್ಕು ತಿಂಗಳ ನಂತರ ಮೇಲ್ಮನವಿ ಸಲ್ಲಿಸಲಾಗಿದೆ. ಸಂತೋಷ್ ರಾವ್ ಅವರೇ ನಿಜವಾದ ಅಪರಾಧಿ ಎಂದು ಸಿಬಿಐ ನಂಬಿದ್ದು, ವಿಚಾರಣೆ ವೇಳೆ ದಾಖಲೆಗಳನ್ನು ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಪ್ರಕರಣದ ಮರುತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಬೆಂಗಳೂರಿನ ಗಿರೀಶ್ ಭಾರದ್ವಾಜ್ ಎನ್ನುವವರು ಈ ಪಿಐಎಲ್ ಸಲ್ಲಿಸಿದ್ದರು.