ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಸಮಾಜವಾದಿ ಪಕ್ಷದ ವಕ್ತಾರ ರಾಜಕುಮಾರ್ ಭಾಟಿ ವಿರುದ್ಧ ಎಫ್‌ಐಆರ್

ಸಮಾಜವಾದಿ ಪಕ್ಷದ (SP) ರಾಷ್ಟ್ರೀಯ ವಕ್ತಾರ ರಾಜಕುಮಾರ್ ಭಾಟಿ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಮುಜಾಫರ್‌ನಗರದಲ್ಲಿ ಮಂಗಳವಾರ ಅವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ.

ಜಸ್ವೀರ್ ಸಿಂಗ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಮುಜಾಫರ್‌ನಗರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಸಂಜಯ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಾಜಕುಮಾರ್ ಭಾಟಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 356 (ಮಾನಹಾನಿ) ಮತ್ತು ಸೆಕ್ಷನ್ 196 (ಧರ್ಮ, ಜಾತಿ ಮುಂತಾದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಎಸ್‌ಎಸ್‌ಪಿ ವಿವರಿಸಿದ್ದಾರೆ.

ಭಾಟಿ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ನೀಡಿರುವ ಹೇಳಿಕೆಯನ್ನು ಖಂಡಿಸಿ ಜಾಟ್ ಮಹಾಸಭಾ ಸೇರಿದಂತೆ ಹಲವು ಸಂಘಟನೆಗಳು ಮುಜಾಫರ್‌ನಗರದಲ್ಲಿ ಪ್ರತಿಭಟನೆ ನಡೆಸಿದ್ದವು. ಅಲ್ಲದೆ ಎಸ್‌ಎಸ್‌ಪಿ ಅವರನ್ನು ಖುದ್ದಾಗಿ ಭೇಟಿಯಾಗಿ ಭಾಟಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದೂರು ಸಲ್ಲಿಸಿದ್ದವು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ತನಿಖೆಯನ್ನು ಮುಂದುವರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು