Tuesday, March 18, 2025

ಸತ್ಯ | ನ್ಯಾಯ |ಧರ್ಮ

ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಹೊತ್ತು ಭೂಮಿ ಕಡೆ ಹೊರಟ ಸ್ಪೇಸ್ ಎಕ್ಸ್ ಬಾಹ್ಯಾಕಾಶ ನೌಕೆ

ಸತತ ಒಂಬತ್ತು ತಿಂಗಳ ಬಾಹ್ಯಾಕಾಶ ಪ್ರಯಾಣದ ನಂತರ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ತಂಗಿರುವ ಸ್ಪೇಸ್ ಎಕ್ಸ್ ಬಾಹ್ಯಾಕಾಶ ನೌಕೆ ಭೂಮಿಗೆ ಮರಳಲಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನಿಂದ ಹೊರಟಿರುವ ಇಬ್ಬರು ಗಗನ ಯಾತ್ರಿಗಳು ಸಧ್ಯದಲ್ಲೇ ಭೂಮಿಗೆ ಬಂದಿಳಿಯಲಿದ್ದಾರೆ.

ಸುನಿತಾ ವಿಲಿಯಮ್ಸ್, ವಿಲ್ಮೋರ್ ಮತ್ತು ಇತರ ಇಬ್ಬರು ಕ್ರೂ-9 ಸದಸ್ಯರೊಂದಿಗೆ, ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಭೂಮಿಗೆ ಮರಳುತ್ತಿದ್ದಾರೆ. ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ಜೂನ್ 5, 2024 ರಂದು ಭೂಮಿಯನ್ನು ಬಿಟ್ಟು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಹೆಜ್ಜೆ ಹಾಕಿದ್ದರು.

ಗಗನಯಾತ್ರಿಗಳು ಕೆಲವು ಸಮಯದವರೆಗೆ ಅಲ್ಲಿ ಇರಬೇಕಾಗಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಅದು ವಿಳಂಬವಾಯಿತು. ನಾಸಾಗೆ ಅವರನ್ನು ಕರೆತರಲು ಸಾಧ್ಯವಾಗಲಿಲ್ಲ. ಆದರೆ ಸ್ಪೇಕ್ಸ್​ ಎಕ್ಸ್​ ಈ ಕಾರ್ಯವನ್ನು ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇವರ ಜೊತೆಗೆ ನಾಸಾದ ನಿಕ್ ಹೇಗ್ ಮತ್ತು ರಷ್ಯಾದ ಅಲೆಕ್ಸಾಂಡರ್ ಗೋರ್ಬುನೋವ್ ಕೂಡ ಐಎಸ್‌ಎಸ್‌ಗೆ ಹೋದರು. ಮೊದಲಿಗೆ, ವಿಲಿಯಮ್ಸ್ ಮತ್ತು ವಿಲ್ಮೋರ್ ಅವರು ಕೆಲವು ವಾರಗಳ ಕಾಲ ತಂಗುವ ಉದ್ದೇಶ ಹೊಂದಿದ್ದರು. ಆದರೆ ಅವರ ಬೋಯಿಂಗ್ ಸ್ಟಾರ್‌ಲೈನರ್ ಕ್ಯಾಪ್ಸುಲ್ ತಾಂತ್ರಿಕ ದೋಷವನ್ನು ಉಂಟುಮಾಡಿದ ಹಿನ್ನೆಲೆಯಲ್ಲಿ ಅಲ್ಲೇ ಉಳಿಯಬೇಕಾಯಿತು.

ಈಗ ಇಬ್ಬರೂ ಗಗನಯಾತ್ರಿಗಳು ಹಿಂದಿರುಗಿದ ನಂತರ, ಒಂಬತ್ತು ತಿಂಗಳ ಬಾಹ್ಯಾಕಾಶ ಪ್ರಯಾಣವು ಕೊನೆಗೊಳ್ಳುತ್ತದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page