Home ಬ್ರೇಕಿಂಗ್ ಸುದ್ದಿ ಸಿಟಿ ರವಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

ಸಿಟಿ ರವಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

0

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಕೆ ಮಾಡಿ ಬಂಧನಕ್ಕೆ ಒಳಪಟ್ಟ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು ಬಿಡುಗಡೆಗೆ ಆದೇಶಿಸಿದೆ.

ಅಶ್ಲೀಲ ಪದ ಬಳಕೆ ಸಂಬಂಧ ದಾಖಲಾಗಿದ್ದಂತ ಎಫ್‌ಐಆರ್ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯ, ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಿಡುಗಡೆಗೆ ಆದೇಶಿಸಿದೆ.

ಸಿ.ಟಿ ರವಿ ಅವರು ತಮ್ಮ ಬಂಧನದ ನಂತ್ರ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಹೀಗಾಗಿ ಸಿ.ಟಿ ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಕರೆತರಲಾಗುತ್ತಿದೆ. ಈ ನಡುವೆಯೇ ಸಿಟಿ ರವಿ ಅವರಿಗೆ ಜಾಮೀನು ಮಂಜೂರಾಗಿದೆ.

ಸಿ.ಟಿ ರವಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಆರಂಭಿಸಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದ್ರೇ, ಸಿ.ಟಿ ರವಿ ಪರವಾಗಿ ಅಶೋಕ್ ಹಾರನಹಳ್ಳಿ ಪ್ರತಿವಾದ ಮಂಡಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದಂತ ನ್ಯಾಯಾಲಯವು, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣವೇ ಬಿಡುಗಡೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.

You cannot copy content of this page

Exit mobile version