Monday, July 1, 2024

ಸತ್ಯ | ನ್ಯಾಯ |ಧರ್ಮ

ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ವಿಶೇಷ ಅತಿಥಿ ಆಹ್ವಾನ: ರಾಜ್ಯ ಸರ್ಕಾರ

ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯ ಸರ್ಕಾರವು ಈ ಬಾರಿಯ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ಅವರನ್ನು ಆಹ್ವಾನಿಸಿದೆ. ಇಲ್ಲಿಯವರೆಗೆ ದಸರಾ ಮಹೋತ್ಸವದ ಉದ್ಘಾನೆಯನ್ನು ಸಾಹಿತಿಗಳು, ಕವಿಗಳು, ರಾಜಕಾರಣಿಗಳು, ಮಠಾದೀಶರು, ಪ್ರಗತಿಪರರು, ವಿದ್ವಾಂಸರು, ಚಲನಚಿತ್ರ ನಟರು ಉದ್ಘಾಟಿಸಿದ್ದರು. ಆದರೆ  ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಅವರು ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡುತ್ತಿರುವುದು ವಿಶೇಷವಾಗಿದೆ.

ಸಾಂಕ್ರಾಮಿಕ ರೋಗ ಕೋವಿಡ್‌ -19 ಕಾರಣ ಎರೆಡು ವರ್ಷಗಳ ಕಾಲ ದಸರಾ ಹಬ್ಬವನ್ನು ಸರಳವಾಗಿ ಆಯೋಜಿಸಲಾಗಿತ್ತು. ಆದರೆ ಈ ಬಾರಿ ಅದ್ಧೂರಿಯಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಪ್ರಕಟಿಸಿದೆ.  ಈ ಬಾರಿಯ ಮೈಸೂರು ದಸರಾ ಹಬ್ಬವು ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5 ವರೆಗೆ ನಡೆಯಲಿದೆ.

Related Articles

ಇತ್ತೀಚಿನ ಸುದ್ದಿಗಳು